Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ದಲಿತರ ಸರ್ವೇ ನಡೆಸಿ, ಮೂಲಸೌಕರ್ಯ ಒದಗಿಸಲು ಆಗ್ರಹ

ಮಂಡ್ಯ ಜಿಲ್ಲೆಯಲ್ಲಿ ದಲಿತರ ಬಗ್ಗೆ ಸರ್ವೆ ನಡೆಸಿ ನಿವೇಶನ, ವಸತಿ ಹಾಗೂ ಸ್ಮಶಾನ ಮುಂದಾದ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ದಲಿತ ಹಕ್ಕುಗಳ ಸಮಿತಿ ರಾಜ್ಯ ಉಪಾಧ್ಯಕ್ಷ ಬಿ. ರಾಜಶೇಖರಮೂರ್ತಿ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ. ಮತ್ತೊಂದೆಡೆ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳ ಸೌಲಭ್ಯಗಳು ಅನುದಾನಗಳು ಅರ್ಹ ದಲಿತರಿಗೆ ಸಿಗುತ್ತಿಲ್ಲ. ದಲಿತರನ್ನು ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಜಾತಿ ಜಾತಿಗಳ ಮತ್ತು ಉಪಜಾತಿಗಳ ನಡುವೆ ಕಂದಕ ಸೃಷ್ಟಿಸಲಾಗುತ್ತಿದೆ. ಹಿಂದು, ಮುಸ್ಲಿಂ ಹೆಸರಿನಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸಲು ದಲಿತ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆಪಾದಿಸಿದರು.

ದಲಿತರ ಏಳಿಗೆ ದಲಿತೇತರರು ಸಹ ಕೈಜೋಡಿಸಿದಾಗ ಮಾತ್ರ ಸಾಧ್ಯವಾಗುತ್ತದೆ, ದಲಿತರಿಗೆ ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನ ಜಾಗವಿಲ್ಲದಿರುವ ನಿರ್ದಶನಗಳು ಹಲವಾರಿವೆ, ಆದ್ದರಿಂದ ಸಾರ್ವಜನಿಕವಾಗಿ ಸ್ಮಶಾನ ಜಾಗ ನೀಡಬೇಕು. ವಸತಿ ರಹಿತರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಆರ್ ಕೃಷ್ಣ, ಜಿಲ್ಲಾ ಕಾರ್ಯದರ್ಶಿ ಅಂಬುಜಿ, ಮಲ್ಲಿಕಾರ್ಜುನ ಸ್ವಾಮಿ, ಗಿರಿಜಮ್ಮ ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!