Thursday, November 19, 2026

ಪ್ರಾಯೋಗಿಕ ಆವೃತ್ತಿ

ಈಡಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ

ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮುದಾಯದವರಾದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಂಡ್ಯ ಜಿಲ್ಲಾ ಆರ್ಯ ಈಡಿಗ ಸಂಘಟನೆಯ ಮುಖಂಡ, ಮಂಡ್ಯ ನಗರಸಭಾ ಸದಸ್ಯ ಟಿ.ಶ್ರೀನಿವಾಸ್ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ, ಮಂಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಬಹು ಸಂಖ್ಯಾತ ಈಡಿಗ ಸಮಾಜದವರಿದ್ದು, ಈ ಜಿಲ್ಲೆಗಳಲ್ಲಿ ನಮ್ಮ ಜನಾಂಗದ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು.

ಈಡಿಗ ಸಮಾಜದ ಆರ್.ಎಲ್.ಜಾಲಪ್ಪರವರು ಕಾಂಗ್ರೆಸ್‌ ಸರ್ಕಾರದಲ್ಲಿ ಕೇಂದ್ರ ಮಂತ್ರಿ ಹಾಗೂ ರಾಜ್ಯ ಮಂತ್ರಿಯಾಗಿ ಕರ್ತವ್ಯ ನಿರ್ವಹಿಸಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಜನಾರ್ಧನ ಪೂಜಾರಿ ರವರು ಕೇಂದ್ರ ಹಣಕಾಸು ಸಚಿವರಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಅವರು ಆಶ್ರಯ, ಆರಾಧನ, ಗ್ರಾಮೀಣ ಕೃಪಾಂಕ, ರೈತರಿಗೆ ಉಚಿತ ವಿದ್ಯುತ್, ಕೊಳವೆ ಬಾವಿ ಹಾಗೂ ಇನ್ನಿತರೆ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆದ್ದರಿಂದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಈ ಬಾರಿ ಕಾಂಗ್ರೆಸ್ ವರಿಷ್ಟರು ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ರಾಘವೇಂದ್ರ, ವಸಂತ ಪ್ರಕಾಶ್, ಶಕುಂತಲಾ, ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ