Tuesday, November 24, 2026

ಪ್ರಾಯೋಗಿಕ ಆವೃತ್ತಿ

ರಾಯಚೂರಿನಲ್ಲಿ ಜನವಾದಿ ಮಹಿಳಾ ಸಂಘಟನೆಯ 12ನೇ ರಾಜ್ಯ ಸಮ್ಮೇಳನ

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 12ನೇ ರಾಜ್ಯ ಸಮ್ಮೇಳನವನ್ನು ಆ.30,31 ಮತ್ತು ಸೆ.01ರಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.

ಸಂಘಟನೆಯು ದೇಶಾದ್ಯಂತ 1 ಕೋಟಿಗೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಮಂಡ್ಯ ಜಿಲ್ಲೆಯಲ್ಲಿ 40 ಸಾವಿ ಸದಸ್ಯರನ್ನೊಳಗೊಂಡಿದೆ. ಸಮ್ಮೇಳನದಲ್ಲಿ ಘಟಕ, ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ರಾಜ್ಯದ ನೂತನ ಸಮಿತಿಯನ್ನು ಆಯ್ಕೆ ಮಾಡಲಿದ್ದು, ಜಿಲ್ಲೆಯಿಂದ 75 ಮಂದಿ ಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ಡಿ.ಕೆ.ಲತಾ, ಜಿಲ್ಲಾ ಕಾರ್ಯದರ್ಶಿ ಸುಶೀಲ, ಖಜಾಂಚಿ ಕಲಾವತಿ.ವಿ. ಉಪಾಧ್ಯಕ್ಷರಾದ ಸುನಿತ, ಶೋಭ, ಪ್ರೇಮಮ್ಮ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ