Thursday, September 19, 2024

ಪ್ರಾಯೋಗಿಕ ಆವೃತ್ತಿ

ಡೆಂಗ್ಯೂ ಪರೀಕ್ಷೆ; ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ತಡೆ| ದರ ನಿಗದಿಪಡಿಸಿದ ಆರೋಗ್ಯ ಇಲಾಖೆ

ಡೆಂಘೀ (ಡೆಂಗ್ಯೂ) ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.

ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಆಸ್ಪತ್ರೆಗಳು ಪರೀಕ್ಷೆಗೆ ಅಧಿಕ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಜನಸಾಮಾನ್ಯರಿಗೆ ಹೊರೆಯಾಗದಂತೆ ಮಹತ್ವದ ಆದೇಶವನ್ನು ಪ್ರಕಟಿಸಿದೆ.

“>

ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಘೀ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಘೀ ಪರೀಕ್ಷೆಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಪರೀಕ್ಷೆಗಳಿಗೆ ಒಟ್ಟು 600 ರೂಪಾಯಿ ದರ ನಿಗದಿ ಮಾಡಿ ಆದೇಶಿಸಿದೆ.

NS1 ಹಾಗೂ Igm ಎರಡು ಪರೀಕ್ಷೆಗಳಿಗೆ ತಲಾ 300 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಘೀ ಪರೀಕ್ಷೆಗೆ 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.

ಇನ್ನು ಈಗಾಗಲೇ ಡೆಂಘೀ ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ.

ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಘೀ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿಯಲ್ಲಿ ಸಭೆಯನ್ನು ಕರೆಯಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡೆಂಘೀ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!