Friday, November 20, 2026

ಪ್ರಾಯೋಗಿಕ ಆವೃತ್ತಿ

ಜೂ. 25 ಕ್ಕೆ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಹೋರಾಟ : ಕೆಂಪೂಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ವಿರೋಧದ ನಡುವೆಯೂ ಭೂ ಸ್ವಾಧೀನಕ್ಕೆ ಹೊರಡಿಸಿರುವ ಅಧಿಸೂಚನೆ ಸಂಪೂರ್ಣ ರದ್ದುಪಡಿಸಲು ಒತ್ತಾಯಿಸಿ ಜೂನ್ 25 ರಂದು ದೇವನಹಳ್ಳಿ ತಾಲೂಕು ಕಛೇರಿ ಎದುರು `ದೇವನಹಳ್ಳಿ ಚಲೋ’ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟರ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾದ ನಿರ್ಧಾರವನ್ನು ಖಂಡಿಸಿ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಹಾಗೂ ಪ್ರಗತಿಪರ ಸಂಘಟನೆಗಳು ಸಂಯುಕ್ತ ಹೋರಾಟ- ಕರ್ನಾಟಕದ ಅಡಿಯಲ್ಲಿ ಈ ಹೋರಾಟ ರೂಪಿಸಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ೧೩ ಗ್ರಾಮಗಳಲ್ಲಿ ಬಲವಂತವಾಗಿ ಕೆಐಎಡಿಬಿ ಭೂ ಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಹೀನಾಯ ಕೃತ್ಯವಾಗಿದ್ದು, ರಾಜ್ಯ ಸರ್ಕಾರದ ಹೇಡಿತನಕ್ಕೆ ಸಾಕ್ಷಿಯಾಗಿದೆ ಎಂದು ಖಂಡಿಸಿದರು.

ಚನ್ನರಾಯಪಟ್ಟಣ ಹೋಬಳಿಯ ೧೩ ಗ್ರಾಮಗಳ ೧೭೭೭ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಲು ಅಲ್ಲಿನ ರೈತರ ಒಪ್ಪದೇ ೧೧೮೦ ದಿನಗಳಿಂದ ನಿರಂತರವಾಗಿ ಚನ್ನರಾಯಪಟ್ಟಣದ ನಾಡಾ ಕಛೇರಿ ಬಳಿ ಅನಿರ್ಧಿಷ್ಟ ಪ್ರತಿಭಟನೆ ನಡೆಸುತ್ತಿದ್ದು, ಸದರಿ ಸ್ವಾಧೀನ ಪ್ರಕ್ರಿಯೆಗೆ ಶೇ ೮೦ರಷ್ಟು ರೈತರು ವಿರೋಧ ವ್ಯಕ್ತಪಡಿಸಿದ್ದರೂ, ಬಲವಂತವಾಗಿ ಸ್ವಾಧೀನಕ್ಕೆ ಮುಂದಾಗಿದ್ದಾರೆ. ಇದು ಭೂಸ್ವಾಧೀನ ಕಾಯ್ದೆ-೨೦೧೩ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್ ಮಾತನಾಡಿ,= ವಿಧಾನಸಭಾ ಚುನಾವಣೆಗೂ ಮುನ್ನ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಲಿನ ಉಸ್ತುವಾರಿ ಮಂತ್ರಿಗಳು ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸುವ ಮೂಲಕ ವಚನ ಭ್ರಷ್ಟ ನಡೆವಳಿಕೆಯನ್ನು ತೋರಿದ್ದಾರೆ ಎಂದು ಕಿಡಿಕಾರಿದರು.

ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್ ಎಸ್ಟೇಟ್ ಮಾಪಿಯಾಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರದ ಈ ನಡೆಯನ್ನು ರೈತರು ಮಾತ್ರವಲ್ಲದೇ ರಾಜ್ಯದಲ್ಲಿ ಅನ್ನತಿನ್ನುವ ಪ್ರತಿಯೊಬ್ಬರು ಖಂಡಿಸಬೇಕಾಗಿದೆ. ಜೂನ್ ೨೫ರಂದು ನಡೆಯುವ ಹೋರಾಟದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಅವರು, ಜಿಲ್ಲೆಯಿಂದ ೨೫೦ರಿಂದ ೩೦೦ ಮಂದಿ ಭಾಗವಹಿಸುವುದಾಗಿ ತಿಳಿಸಿದರು.

ಗೋಷ್ಠಿಯಲ್ಲಿ ಲಿಂಗಪ್ಪಾಜಿ, ಅಣ್ಣಯ್ಯ, ಶವಮಲ್ಲಯ್ಯ, ಶಿವಕುಮಾರ್, ಲತ, ಹನುಮೇಶ್, ಸತೀಶ್, ಸಿ.ಕುಮಾರಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ