Friday, November 20, 2026

ಪ್ರಾಯೋಗಿಕ ಆವೃತ್ತಿ

ದೇವನಹಳ್ಳಿ ರೈತ ಹೋರಾಟಕ್ಕೆ ಆಗಮಿಸುತ್ತಿದ್ದ ರೈತ ನಿಧನ

ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ನಡೆಯುತ್ತಿದ್ದ ದೇವನಹಳ್ಳಿ ರೈತರ ಭೂಮಿ ಹೋರಾಟದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುರುಬರ ಹುಂಡಿಯ ರೈತ ಈಶ್ವರಪ್ಪ ನಿಧನ ಹೊಂದಿದ್ದಾರೆ.

ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಲು ಈಶ್ವರಪ್ಪ ಆಗಮಿಸುತ್ತಿದ್ದರು. ಆದರೆ ಮಾರ್ಗ ಮಧ್ಯೆ ರೈಲು ಪ್ರಯಾಣದ ವೇಳೆಯೇ ಹೃದಯಾಘಾತಕ್ಕೀಡಾಗಿದ್ದಾರೆ.

ಇವರ ನಿಧನಕ್ಕೆ ಸಂಯುಕ್ತ ಕಿಸಾನ್ ಹೋರಾಟ ಸೇರಿದಂತೆ ಹಲವು ರೈತ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ