Saturday, November 21, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಿ : ಡಾ.ಎಂ.ಬಿ ಪ್ರಮೀಳ

ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಾವಂತರಾಗಲು ಪ್ರತಿ ಕ್ಷೇತ್ರದ ಎಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಎನ್. ಎಸ್. ಎಸ್ ಕಾರ್ಯಕ್ರಮ ಸಂಯೋಜಕರು ಹಾಗೂ ಮಂಡ್ಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಾರದ ಡಾ.ಪ್ರಮೀಳ ಎಂ. ಬಿ ತಿಳಿಸಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್, ಎನ್. ಎಸ್.ಎಸ್, ಘಟಕಗಳು ಮತ್ತು ಮಂಡ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ “ಜಿಲ್ಲಾ ಮಟ್ಟದ ಯುವಜನೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಜನತೆ ದೇಶದ ಅಭಿವೃದ್ಧಿಗೆ ಮತ್ತು ಬದಲಾವಣೆಗೆ ಶ್ರಮಿಸಬೇಕಾಗಿದ್ದು, ಯುವ ಜನತೆಯಿಂದ ಸದೃಢವಾದ ದೇಶಕಟ್ಟಲು ಸಾಧ್ಯ ಎಂಬುವುದು ಸ್ವಾಮಿ ವಿವೇಕಾನಂದ ಅವರ ನಂಬಿಕೆಯಾಗಿದೆ. ಸ್ವಾಮಿ ವಿವೇಕಾನಂದರ ಕನಸು ಯುವ ಸಂಪತ್ತು ದೇಶ ಬೆಳಗುವುದಾಗಿದೆ ಜಿಲ್ಲೆಯಲ್ಲಿನ ಪ್ರತಿ ಯುವ ಜನತೆ ವಿವೇಕಾನಂದರ ನಂಬಿಕೆಯನ್ನು ಉಳಿಸಿ, ಅವರ ಕನಸು ನನಸಾಗಿಸಿ ಎಂದು ತಿಳಿಸಿದರು.

ರಾಷ್ಟ್ರಯುವ ಪ್ರಶಸ್ತಿ ಪುರಸ್ಕೃತರಾದ ನಾಗರಾಜು ಮಾತನಾಡಿ ಯುವ ಜನೋತ್ಸವ ಜಿಲ್ಲೆಗೆ ಹೆಸರು ತರುವ ಒಂದು ಭಾಗವಾಗಿದೆ. ಯುವ ಜನೋತ್ಸವ ಯಶಸ್ಸಿಗೆ ಸರ್ಕಾರ ಮತ್ತು ಇಲಾಖೆಗಳು ಶ್ರಮಿಸುತ್ತಿದೆ ಎಂದರೆ ತಪ್ಪಾಗುವುದಿಲ್ಲ. ಯುವಕರಲ್ಲಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಗೆ ಒಂದು ವೇದಿಕೆಯನ್ನು ಸರ್ಕಾರ ಒದಗಿಸಿದೆ ಇದರ ಸದುಪಯೋಗ ಪಡೆದುಕೊಂಡು ರಾಜ್ಯ ಮತ್ತು ರಾಷ್ಟ ಮಟ್ಟದವರೆಗೆ ಹೆಸರು ಮಾಡಿ ಎಂದು ಯುವಕರನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯುವ ಜನೋತ್ಸವದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಹುಮಾನ ಪಡೆದ ವಿಜೇತರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಂಗಲ ಯೋಗೇಶ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಓಂ ಪ್ರಕಾಶ್, ಮೈ ಭಾರತ್ ಕೇಂದ್ರದ ಅಧಿಕಾರಿ ಶೃತಿ, ಯುವ ಪ್ರಶಸ್ತಿ ವಿಜೇತ ಅನಿಲ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ