Saturday, November 21, 2026

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳ | ಮಾಧ್ಯಮದವರ ಮೇಲೆ ಗೂಂಡಾಗಳಿಂದ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ.

“>

 

ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದಾರೆ ಮತ್ತು ಎಲ್ಲರೂ ಈ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು ಒಬ್ಬರಿಗೆ ತೀವ್ರ ಗಾಯಗಳಾಗಿವೆ.

ಸೌಜನ್ಯ ಮನೆಯ ಪಾಂಗಳ ಕ್ರಾಸ್ ಸಮೀಪ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ದಾಳಿ ನಡೆಸಿದ ಗುಂಪಿನಲ್ಲಿ ಸುಮಾರು 50ರಿಂದ ನೂರು ಜನ ಇದ್ದರೆಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಸದ್ಯ ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ