Friday, November 20, 2026

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದೆ ಎಂದ ಮಂಡ್ಯದ ವ್ಯಕ್ತಿ ಹೇಳಿದ್ದೇನು ?

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ ರಾಜು ಎಂಬ ವ್ಯಕ್ತಿ ಇತ್ತೀಚೆಗೆ ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ.

ಸಾಕ್ಷಿ ದೂರುದಾರ ಮುಸುಕುಧಾರಿ ಹಾಗೂ ನಾನು ಜೊತೆಯಲ್ಲಿ ಕೆಲಸ ಮಾಡುತ್ತಿದ್ದೇವು, ಧರ್ಮಸ್ಥಳದಲ್ಲಿ‌ 10 ವರ್ಷಗಳ ಹಿಂದೆ ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ನಮಗೆ ಮಾಹಿತಿ ಕಚೇರಿಯಿಂದ ವಿಷಯ ತಿಳಿಸಲಾಗಿತ್ತು. ಆಗ ನಾವು ಹೆಣಗಳನ್ನು ಎತ್ತಿ ದಡಕ್ಕೆ ತರುತ್ತಿದ್ದೆವು. ನಂತರ ಅದನ್ನು ಅಂಬುಲೆನ್ಸ್‌ ಮೂಲಕ ಬೆಳ್ತಂಗಡಿಗೆ ಸಾಗಿಸಲಾಗುತ್ತಿತ್ತು ಎಂದು ಹೇಳಿದ್ದಾರೆ.

ನೂರಾರು ಶವಗಳನ್ನು ಹೂತಿದ್ದೇನೆ ಎನ್ನುವುದು ಸುಳ್ಳು. ಅಷ್ಟೊಂದು ಶವ ಹೂತಿದ್ದರೆ ಮೂಳೆಗಳಾದ್ರೂ ಸಿಗಬೇಕಿತ್ತು. ಜೆಸಿಬಿ ತಂದರೂ ಮೂಳೆ ಸಿಕ್ಕಿಲ್ಲ. ಕೆಲಸ ಕೊಟ್ಟ ಯಜಮಾನರ ಮೇಲೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಇದು ಬಹಳ ತಪ್ಪು ಎಂದು ಹೇಳಿದರು. ಮೊದಲು ಇಲ್ಲಿ ನನ್ನ ಅತ್ತೆ, ಮಾವ ಸಚ್ಛತಾ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ಹುಷಾರಿಲ್ಲದ ಕಾರಣ ನಾನು ಹೋಗಿದ್ದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬ ಮತ್ತು ಮಾಸ್ಕ್‌ ಮ್ಯಾನ್‌ ಕುಟುಂಬ ಅಕ್ಕಪಕ್ಕದ ಮನೆಯಲ್ಲಿ ನೆಲೆಸಿದ್ದೇವು ಎಂದು ತಿಳಿಸಿದ್ದಾರೆ.

ನಾನು ಕೆಲಸ ಮಾಡಿದ್ದ ನಾಲ್ಕು ವರ್ಷಗಳ ಅವಧಿಯಲ್ಲಿ ನೇತ್ರಾವತಿ ಬಳಿ ಎರಡು ಶವ ಸಿಕ್ಕಿತ್ತು. ಪುರುಷ ಮತ್ತು ಮಹಿಳೆಯ ಶವ ಸಿಕ್ಕಿತ್ತು. ಸಿಕ್ಕಿದ ಶವಗಳನ್ನು ಹೂಳುತ್ತಿರಲಿಲ್ಲ. ಅಂಬುಲೆನ್ಸ್‌ ಬರುತ್ತಿತ್ತು. ವೈದ್ಯರು, ಪೊಲೀಸರು ಬರುತ್ತಿದ್ದರು. ನಂತರ ಆ ಮೃತದೇಹವನ್ನು ಬೆಳ್ತಂಗಡಿಗೆ ಕಳುಹಿಸಲಾಗುತ್ತಿತ್ತು. ನೂರಾರು ಶವ ಸಿಕ್ಕಿದೆ ಎನ್ನುವುದು ಸುಳ್ಳು ಎಂದು ಅವರು ಹೇಳಿದ್ದಾರೆ.

ಒಟ್ಟು ನಾಲ್ಕು ಕುಟುಂಬಗಳು ಸ್ವಚ್ಛತಾ ಕೆಲಸ ಮಾಡುತ್ತಿದ್ದವು. ಮಾಹಿತಿ ಕಚೇರಿ ಬಿಟ್ಟರೆ ಬೇರೆ ಯಾರೂ ನಮಗೆ ಆ ಕೆಲಸ ಮಾಡು, ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ನಮ್ಮ ಜೊತೆ ಕೆಲಸ ಮಾಡುವಾಗ ಅನಾಮಿಕ ಚೆನ್ನಾಗಿಯೇ ಇದ್ದ. ನಾವು ಬರುವ ಮೊದಲೇ ಅವರ ಕುಟುಂಬ ಅಲ್ಲಿ ನೆಲೆಸಿತ್ತು. ನಾನು ಕೆಲಸ ಬಿಟ್ಟು ಬಂದ ನಂತರವೂ ಆತ ಅಲ್ಲಿ ಕೆಲಸ ಮಾಡುತ್ತಿದ್ದ. ಆತ ಶವದಿಂದ ಚಿನ್ನ ಕದಿಯುತ್ತಿದ್ದ ವಿಚಾರ ನನಗೆ ಗೊತ್ತಿಲ್ಲ. ನಾನು ಬಿಟ್ಟ ಬಂದ ನಂತರ ಆತ ಯಾಕೆ ಕೆಲಸ ಬಿಟ್ಟ ಅನ್ನೋದು ಗೊತ್ತಿಲ್ಲ. ನನ್ನನ್ನು ಎಸ್ ಐಟಿಯವರು ವಿಚಾರಣೆ ನಡೆಸಿದ್ದಾರೆ. ಮುಂದೆ ಕೋರ್ಟ್‌ನಲ್ಲಿ ಕೇಳಿದ್ರು ಇದನ್ನೇ ಹೇಳ್ತೀನಿ ಎಂದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ