Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಸಾರ್ವಜನಿಕ ಆಸ್ಪತ್ರೆಗೆ ಡಿಹೆಚ್ಓ ಭೇಟಿ: ಪರಿಶೀಲನೆ

ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ ಡಾ.ಮೋಹನ್ ದಿಢೀರ್ ಭೇಟಿ ನೀಡಿ, ರೋಗಿಗಳ ಆರೋಗ್ಯ ಕುಶಲೋಪರಿ ವಿಚಾರಣೆ ನಡೆಸಿ ವಾರ್ಡಗಳಲ್ಲಿ ಸಂಚರಿಸಿ ಪರಿಶೀಲಿಸಿದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಕಾರ್ಯದಕ್ಷತೆ ಹಾಗೂ ಸೇವಾ ಮನೋಭಾವನೆಗೆ ಡಿಹೆಚ್ ಓ ಮೆಚ್ಚುಗೆ ವ್ಯಕ್ತಪಡಿಸಿದರು.

‘ವೈದ್ಯೋ ನಾರಾಯಣೊ ಹರಿ’ ಎಂಬ ನಾಣ್ನುಡಿಯಂತೆ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಬಡಜನರೇ ಆಗಿರುವುರಿಂದ ವೈದ್ಯರು ರೋಗಿಗಳನ್ನು ನಗುಮೊಗದಿಂದ ಆತ್ಮೀಯತೆಯೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕಲ್ಲದೆ, ಸರ್ಕಾರವೇ ಉಚಿತವಾಗಿ ನೀಡುವ ಓಷದಗಳು ಹಾಗೂ ಮಾತ್ರೆಗಳನ್ನು ನೀಡಿ ಶೀಘ್ರವೇ ಗುಣಮುಖರಾಗುವಂತೆ ಹಾರಯಿಸಿ ಕಳಿಸಿಕೊಡಬೇಕು ಎಂದು ಕಿವಿಮಾತು ಹೇಳಿದರು.

ಡಾ.ಮೋಹನ್ ಆಸ್ಪತ್ರೆಯ ವಾತಾವರಣ ಹಾಗೂ ವಾರ್ಡ್ ಗಳನ್ನು ಸ್ವಚ್ಛತೆಯಿಂದ ಇಟ್ಟುಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಡಾ. ಶಶಿಕುಮಾರ್, ತಾಲೂಕು ಆರೋಗ್ಯಧಿಕಾರಿ ಡಾ.ಅಜಿತ್ ಸೇರಿದಂತೆ ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ