Thursday, September 19, 2024

ಪ್ರಾಯೋಗಿಕ ಆವೃತ್ತಿ

ಧೃತಿಗೆಡದೇ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಿ – ಪಿ.ಎಂ.ನರೇಂದ್ರಸ್ವಾಮಿ

ಪ್ರತಿಯೊಬ್ಬರು ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುತ್ತಾರೆ, ನೋವುಗಳಲ್ಲಿ ಬೆಂದು ನೋವಿನ ನಡುವೆಯೂ ಬದುಕನ್ನು ರೂಪಿಸಿಕೊಳ್ಳಲು ಬಯಸುವವರು ಧೃತಿಗೆಡದೇ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ಮಳವಳ್ಳಿ ಪಟ್ಟಣದ ಶಾಂತಿ ಪದವಿ ಪೂರ್ವ ಕಾಲೇಜು ವತಿಯಿಂದ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದ  ರಾಷ್ಟ್ರೀಯ ಸೇವಾ ಯೋಜನೆಯ 17ನೇ ವರ್ಷದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರು, ಕೂಲಿಕಾರರು. ಬಡವರು, ಶ್ರೀಮಂತರು ಎಲ್ಲರಿಗೂ ವಾರಕ್ಕೆ 7 ದಿನಗಳೇ ಇವೆ. ಗ್ರಾಮೀಣ ಪ್ರದೇಶದ ಜನರಿಗೆ ಹಲವಾರು ವಿಷಯಗಳನ್ನು ತಿಳಿಸಿ ಪರಿಸರ, ಸ್ವಚ್ಚತೆ, ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ನಿಜವಾದ ಬದುಕು ಏನು ಎನ್ನುವುದನ್ನು ರಾಷ್ಟ್ರೀಯ ಸೇವಾ ಯೋಜನೆಯು ಶಿಬಿರಾರ್ಥಿಗಳಿಗೆ ಕಲಿಸಲಿದದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಳ್ಳಬೇಕೆಂದು ತಿಳಿಸಿದರು.

ಶಿಬಿರದಲ್ಲಿ ಪ್ರಾಂಶುಪಾಲ ಶಿವಪ್ಪ, ಟಿಎಪಿಸಿಎಂಎಸ್ ನಿರ್ದೇಶಕ ಬಸವೇಶ್, ಯೂತ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!