Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿಭಿನ್ನ ಶೀರ್ಷಿಕೆಯ ʻಥಗ್ಸ್‌ ಆಫ್‌ ರಾಮಘಡʼ ಫಸ್ಟ್‌ ಲುಕ್‌ ಪೋಸ್ಟರ್‌ ಬಿಡುಗಡೆ

ಯುವ ನಿರ್ದೇಶಕ ಕಾರ್ತಿಕ್‌ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಸಿನಿ ರಸಿಕರ ಗಮನ ಸೆಳೆಯುತ್ತಿದೆ.

ವಿಭಿನ್ನ ಶೀರ್ಷಿಕೆಯ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಕೂಡ ಭಿನ್ನವಾಗಿ ಮೂಡಿಬಂದಿದೆ. ಹಿರಿಯ ನಿರ್ದೇಶಕ ಯೋಗರಾಜ್‌ ಭಟ್‌ ಫಸ್ಟ್‌ ಲುಕ್‌ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

‘ಥಗ್ಸ್ ಆಫ್ ರಾಮಘಡ’ ನೈಜ ಘಟನೆಯನ್ನು ಆಧರಿಸಿದ ಚಿತ್ರವಾಗಿದೆ. 1995 ಉತ್ತರ ಕರ್ನಾಟಕದ ಯಾದಗಿರಿಯಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಕಾರ್ತಿಕ್ ಈ ಚಿತ್ರದ ಕಥೆಯನ್ನು ಹೆಣೆದಿದ್ದಾರೆ. 

ಈಗಾಗಲೇ ಚಿತ್ರದ ಶೂಟಿಂಗ್‌ ಪೂರ್ಣಗೊಂಡಿದ್ದು, ಸುರಪುರ, ವಿಜಯಪುರ, ಶಹಪುರ, ತಾಳಿಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಚಾಲ್ತಿಯಲ್ಲಿದ್ದು, 2023ಕ್ಕೆ ‘ಥಗ್ಸ್ ಆಫ್ ರಾಮಘಡ’ ತೆರೆಗೆ ಬರಲಿದೆ.

ರಂಗಭೂಮಿ ಹಿನ್ನೆಲೆಯ ಚಂದನ್ ರಾಜ್, ಅಶ್ವಿನ್ ಹಾಸನ್ ಮತ್ತು ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಸೂರ್ಯ ಕಿರಣ್, ಪ್ರಭು ಹೊಸದುರ್ಗ, ವಿಶಾಲ್ ಪಾಟೀಲ್, ರವಿ ಸಾಲಿಯನ್, ರಾಘವೇಂದ್ರ, ಭೀಷ್ಮ, ಲೋಕೇಶ್ ಗೌಡ, ಟೈಗರ್ ಗಂಗ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಭಾರತ್ ಟಾಕೀಸ್ ಬ್ಯಾನರ್‌ನಡಿ ಜೈ ಕುಮಾರ್ ಮತ್ತು ಕೀರ್ತಿ ರಾಜ್ ಎಂಬುವವರು ʼಥಗ್ಸ್ ಆಫ್ ರಾಮಘಡʼವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯವಿರುವ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಈ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಮತ್ತು ಶ್ರೀಧರ್ ವೈ ಎಸ್ ಸಂಕಲನ ಚಿತ್ರಕ್ಕಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!