Thursday, November 19, 2026

ಪ್ರಾಯೋಗಿಕ ಆವೃತ್ತಿ

ನುಡಿದಂತೆ ನಡೆದ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ದಿನೇಶ್‌ ಗೂಳಿಗೌಡ

ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ನಾಯಕರಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಮೊದಲನೇ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಈಡೇರಿಸುವುದಾಗಿ ನಮ್ಮ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದರು.

ಅದರಂತೆ ಇಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಡಿ.ಕೆ. ಶಿವಕುಮಾರ್‌ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಿದ ಕೂಡಲೇ, ಮೊದಲ ಕ್ಯಾಬಿನೆಟ್‌ ಸಭೆ ನಡೆಸಿ ಈ 5 ಗ್ಯಾರಂಟಿಗಳಿಗೆ ಒಪ್ಪಿಗೆ ನೀಡಿದ್ದು, ಅಭಿನಂದನಾರ್ಹವಾಗಿದೆ.

ಎಷ್ಟೇ ಆರ್ಥಿಕ ಹೊರೆ ಬಂದರೂ ಕೂಡಾ ನಿವಾರಣೆ ಮಾಡಿಕೊಂಡು, ರಾಜ್ಯದ ಜನರ ಅಭ್ಯುದಯಕ್ಕಾಗಿ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ