Thursday, November 19, 2026

ಪ್ರಾಯೋಗಿಕ ಆವೃತ್ತಿ

ನುಡಿದಂತೆ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರ: ಶಾಸಕ ದಿನೇಶ್ ಗೂಳಿಗೌಡ


  • ವಿಧಾನ ಮಂಡಲ ಜಂಟಿ ಅಧಿವೇಶನದ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ

  • ಭಾಷಣವು ರಾಜ್ಯದ ಸಮಗ್ರ ಅಭಿವೃದ್ಧಿಯ ಮುನ್ನೋಟ ತೆರೆದಿಟ್ಟಿದೆ

ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರದ ಗುರಿಯಾಗಿದೆ. ಆ ನಿಟ್ಟಿನಲ್ಲಿ ಹಲವಾರು ಕೆಲಸಗಳನ್ನು ಈಗಾಗಲೇ ಮಾಡಿದೆ. ಗ್ಯಾರಂಟಿಗಳ ಅನುಷ್ಠಾನದ ಜತೆ ರೈತರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಿದೆ ಎಂದು ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ ಗೂಳಿಗೌಡ ಹೇಳಿದರು.

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರು ಸೋಮವಾರ ಮಾಡಿದ ಭಾಷಣದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಪಾಲರ ಭಾಷಣದಲ್ಲಿ ರಾಜ್ಯವು ಸರ್ಕಾರದ ಮುನ್ನೋಟವನ್ನು ತೆರೆದಿಟ್ಟಿದೆ. ಸರ್ಕಾರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ನೋಡಬಹುದಾಗಿದೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ 6.5 ಕೋಟಿ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳ ಅನುಷ್ಠಾನ ಮಾಡುತ್ತಿದೆ. ಜತೆಗೆ, ಕೃಷಿಕರ ಪರವಾದ ಯೋಜನೆಗಳ ‌ಬಗ್ಗೆ ಹೇಳಲಾಗಿದೆ. ಅದನ್ನು ನೋಡಿದರೆ, ಗ್ರಾಮೀಣ ರೈತರ ಬಗ್ಗೆ ಸರ್ಕಾರಕ್ಕೆ ಇರುವ ಕಾಳಜಿಯನ್ನು ಕಾಣಬಹುದಾಗಿದೆ ಎಂದು ಶಾಸಕರು ಹೇಳಿದ್ದಾರೆ.

ಹಸಿದವರಿಗೆ ಅನ್ನ ನೀಡುವುದು ಹಾಲಿ ಸರ್ಕಾರದ ಸಂಕಲ್ಪವಾಗಿದೆ. ಸಮ ಸಮಾಜದ ಧ್ಯೇಯವನ್ನು ಸರ್ಕಾರ ಹೊಂದಿದೆ. ಸಮಾಜದ ಬದಲಾವಣೆಗೆ ಹಾಗೂ ಆರ್ಥಿಕತೆಯ ಚೈತನ್ಯಕ್ಕೆ ಈಗ ನೀಡುತ್ತಿರುವ ಸೌಲಭ್ಯಗಳು ಅಗತ್ಯವಾಗಿವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಪರಿಹಾರ, ನೀಡಿ
ಕಳೆದ ವರ್ಷ ಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಇದುವರೆಗೂ ಪರಿಹಾರ ದೊರಕಿಲ್ಲ. ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಬೇಕು. ರೈತರಿಗೆ ಕೃಷಿ ಹೊಂಡ, ಪಾಲಿ ಹೌಸ್, ಜತೆಗೆ ರೈತರು, ರೈತ ಮಹಿಳೆಯರಿಗೆ ದಿನನಿತ್ಯದ ಖರ್ಚುಗಳಿಗೆ ಅನುಕೂಲವಾಗುವಂತೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೂ ಇದು ಅನುಕೂಲವಾಗಲಿದೆ. ಒಟ್ಟಾರೆ ರಾಜ್ಯಪಾಲರ ಭಾಷಣವು ರಾಜ್ಯದ ಸರ್ವತೋಮುಖ ಅಭಿವೃದ್ದಿಯ ನೀಲ ನಕ್ಷೆಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ರೈತರ ಹಿತ ಕಾಪಾಡಿದ ಸರ್ಕಾರ
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಒಟ್ಟು 669 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹ ಧನವನ್ನು ಉಳಿಸಿಕೊಂಡಿತ್ತು. ಒಟ್ಟು 7 ತಿಂಗಳು ಬಾಕಿ ಉಳಿಸಿಕೊಂಡಿತ್ತು. ಅದರಲ್ಲಿ ಈ ಬಾರಿ ರಾಜ್ಯ ಸರ್ಕಾರ 421 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 26 ಲಕ್ಷ ಹಾಲು ಉತ್ಪಾದಕರಿದ್ದಾರೆ. ಅವರಿಗೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ನೀಡುವ ಮೂಲಕ ರೈತರ ಹಿತವನ್ನು ನಮ್ಮ ಸರ್ಕಾರ ಕಾಪಾಡಿದೆ ಎಂದು ಹೇಳಿದ್ದಾರೆ.

ಶೀಘ್ರ ಪರಿಹಾರ ಒದಗಿಸಲು ಮನವಿ
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಗಂಟು ರೋಗದಿಂದ ಸಾವಿರಾರು ರಾಸುಗಳು ಮೃತಪಟ್ಟಿದ್ದವು. ಆದರೆ, ಇನ್ನೂ ಅನೇಕ ರೈತರಿಗೆ ಪರಿಹಾರವೇ ಸಿಕ್ಕಿಲ್ಲ. ಗಂಟು ರೋಗದಿಂದ ಮೃತಪಟ್ಟ 5,851 ರಾಸುಗಳಿಗೆ 12 ಕೋಟಿ ರೂಪಾಯಿ ಹಣ ಬಾಕಿ ಇದೆ. ಈ ಹಣವನ್ನು ಅರ್ಹ ರೈತರಿಗೆ ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ