Saturday, November 21, 2026

ಪ್ರಾಯೋಗಿಕ ಆವೃತ್ತಿ

ಬೊಮ್ಮಾಯಿಯವರೇ ಮೋದಿ ಸರ್ಕಾರದ ನಡೆ ನಿಮಗೆ ತುರ್ತು ಪರಿಸ್ಥಿತಿ ಎನಿಸುತ್ತಿಲ್ಲವೇ ? – ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತು ಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನೆ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ‘ಅತೀ ಶೀಘ್ರದಲ್ಲೇ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ತಲೆದೋರಬಹುದು’ ಎಂದುDinesh Gundurao ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಅವರು ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

“>

”ಬೊಮ್ಮಾಯಿಯವರೇ, ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತು ಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“>

”ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌. ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಬ್ಧಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ” ಎಂದು ಹೇಳಿದ್ದಾರೆ.

”ಬೊಮ್ಮಾಯಿಯವರೇ ಒಂದು ಜವಾಬ್ಧಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ನೀವು ಕಾನೂನು ಉಲ್ಲಂಘಿಸುವವರ ಪರವೇ?” ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಬೊಮ್ಮಾಯಿ ಹೇಳಿಕೆ

”ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ ಈಗಾಗಲೇ ಅಧಿಕಾರದ ಅಮಲು ಏರಿದೆ. ಪ್ರತಿಯೊಬ್ಬ ಸಚಿವರೂ ವಿವಾದಾತ್ಮಕ ಮತ್ತು ಜನವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ದಿನಗಳು ಬರುವ ಆತಂಕ ಕಾಣುತ್ತಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದರು.

”ಒಬ್ಬ ಸಚಿವರು ಗೋಹತ್ಯೆ ನಿಷೇಧ ಕಾನೂನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಾರೆ. ಇನ್ನೊಬ್ಬ ಸಚಿವರು ಸರಕಾರದ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತಾರೆಂದು ಬೆದರಿಸುತ್ತಾರೆ. ಜನರ ವಾಕ್‌ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ” ಎಂದು ಬೊಮ್ಮಾಯಿ ಕಿಡಿಕಾರಿದ್ದರು.

”ಪಶುಸಂಗೋಪನೆ ಸಚಿವರು ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಹೇಳಿದ್ದಾರೆ. ಇದಕ್ಕೆ ಕೆಲವು ಸಚಿವರು ದನಿಗೂಡಿಸಿದ್ದಾರೆ. ಗೋಹತ್ಯೆ ಕಾಯ್ದೆ ನಾವು ಜಾರಿ ಮಾಡಿದ್ದಲ್ಲ. 1960ರ ಅವಧಿಯಲ್ಲೇ ಇದು ಜಾರಿಗೆ ಬಂದಿದೆ. ನಾವು ಗೋ ಹತ್ಯೆ ಮಾಡಿದರೆ ಅದಕ್ಕೆ ಕಠಿಣ ಶಿಕ್ಷೆ ಕಾಯ್ದೆ ಜಾರಿ ಮಾಡಿದ್ದೇವೆ. ಒಂದು ವೇಳೆ ಕಾಂಗ್ರೆಸ್‌ ಸರಕಾರ ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡಲು ಮುಂದಾದರೆ ಖಂಡಿತ ಅದಕ್ಕೆ ಆಪತ್ತು ಕಾದಿದೆ” ಎಂದು ಎಚ್ಚರಿಕೆ ನೀಡಿದರು.

”ರಾಜ್ಯದ ಅಭಿವೃದ್ಧಿ ಮಾಡಲು ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ವಿಪಕ್ಷವಾಗಿ ಸುಮ್ಮನೆ ಕುಳಿತುಕೊಳ್ಳು ವುದಿಲ್ಲ. ಯಾರನ್ನು ಜೈಲಿಗೆ ಹಾಕುತ್ತೀರಿ ಹಾಕಲಿ. ನಿಮ್ಮ ನೀತಿಯಿಂದ ಜನ ತಿರುಗಿ ಬಿದ್ದರೆ ಯಾವ ಜೈಲುಗಳು ಸಾಕಾಗುವುದಿಲ್ಲ. ಚಾಬೂಕಿನಿಂದ ಹೊಡೆಯಲು ಇದು ಇಸ್ಲಾಂ ರಾಷ್ಟ್ರವೂ ಅಲ್ಲ. ತುರ್ತು ಪರಿಸ್ಥಿತಿ ತರುವ ಪ್ರಯತ್ನಕ್ಕೆ ಪ್ರಜಾಪ್ರಭುತ್ವದಲ್ಲಿ ಜನರ ಶಕ್ತಿ ದೊಡ್ಡದಿದೆ” ಎಂದು ಹೇಳಿದ್ದರು.

ಬೊಮ್ಮಾಯಿ ಅವರ ಈ ಹೇಳಿಕೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ”ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌” ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ