Wednesday, July 24, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜ.6ಕ್ಕೆ ಅಂಗವಿಕಲರ ಹಾಗೂ ಪಾಲಕರ 3ನೇ ರಾಜ್ಯ ಸಮ್ಮೇಳನ

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವತಿಯಿಂದ ಜ.6ರಂದು ಬೆಳಿಗ್ಗೆ 11.30 ಗಂಟೆಗೆ ಮಂಡ್ಯನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಅಂಗವಿಕಲರ ಹಾಗೂ ಪಾಲಕರ 3ನೇ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಎನ್.ನಾಗರಾಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಡಾ ಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಒಕ್ಕೂಟದ ಅಧ್ಯಕ್ಷ ಜಿ.ಎನ್.ನಾಗರಾಜ್ ಪ್ರಾಸ್ತಾವಿಕ ಭಾಷಣ ಮಾಡುವರು. ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ. (ಎನ್‌ಪಿಆರ್‌ಡಿ ) ಕಾರ್ಯಾಧ್ಯಕ್ಷ ನಂಬುರಾಜನ್ ದಿಕ್ಕೂಚಿ ಭಾಷಣ ಮಾಡುವರು ಎಂದರು.

ಮುಖ್ಯ ಅತಿಥಿಗಳಾಗಿ ಜಿ.ಪಂ.ಸಿಇಓ ಶೇಕ್ ತನ್ನೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್. ನಾಗರಾಜ್, ಎಸ್ಪಿ ಎನ್. ಯತೀಶ್ಮ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ,ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಎಂ. ಪುಟ್ಟಮಾದು, ಕರ್ನಾಟಕ ಪ್ರಾಂತ ರೈತ ಸಂಘದ ಕೃಷ್ಣಗೌಡ ಟಿ.ಎಲ್, ಎನ್‌ಪಿಆರ್‌ಡಿ ಕಾರ್ಯಕಾರಿ ಸದಸ್ಯರಾದ ರಾಜನ್, ಮಂಜುನಾಥ ಹೆಬ್ಬಾ‌ರ್ ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಜಿ.ಎನ್.ಯಶಸ್ವಿ, ದೊಡ್ಡಮರೀಗೌಡ, ಮಲ್ಲೇಶ ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!