Wednesday, October 23, 2024

ಪ್ರಾಯೋಗಿಕ ಆವೃತ್ತಿ

ಶಿಸ್ತು- ಸಂಸ್ಕಾರ ಕಲಿಸುವಲ್ಲಿ ಶಿಕ್ಷಕರ ಶ್ರಮ ಅಪಾರ

ವಿದ್ಯಾರ್ಥಿಗಳಿಗೆ ಜವಾಬ್ದಾರಿ, ಶಿಸ್ತು, ಸಂಸ್ಕಾರ ಕಲಿಸುವುದರಲ್ಲಿ, ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವುದರಲ್ಲಿ ಶಿಕ್ಷಕರ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು ಹೇಳಿದರು.

ಮಂಡ್ಯ ನಗರದ ಮಾಂಡವ್ಯ ಎಕ್ಸಲೆನ್ಸ್‌ ಪಿಯು ಕಾಲೇಜು ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಎಸ್‌ಬಿಐ ಎಜುಕೇಷನ್‌ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಕೆಲವು ವಿದ್ಯಾರ್ಥಿಗಳು ಶೇ.100 ಫಲಿತಾಂಶ ಪಡೆದುಕೊಂಡರೂ ಕೂಡ ಅವರಿಗೆ ಸಂಸ್ಕಾರದ ಅರಿವಿರುವುದಿಲ್ಲ, ಕೆಲವು ಅಂಕ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶಿಸ್ತು, ಸಂಸ್ಕಾರದ ಅರಿವಿರುತ್ತದೆ, ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಕಾಯಕವೆಂದರೆ ಅದು ಶಿಕ್ಷಕ ವೃತ್ತಿಯಾಗಿದೆ ಎಂಬುದನ್ನು ಯಾರೂ ಮರೆಯಬಾರದು ಎಂದರು.

ವಿಧಾನ ಪ‍ರಿಷತ್‌ ಸದಸ್ಯ ಮಧು ಜಿ.ಮಾದೇಗೌಡ ಮಾತನಾಡಿ, ಸಮಾಜಕ್ಕೆ ಮತ್ತೊಂದು ಹೆಸರೇ ಶಿಕ್ಷಕರು ಎಂಬುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ  ಶಿಕ್ಷಕರಿಗೆ ಹಿಡಿದ ಕೈಗನ್ನಡಿಯಾಗಿದೆ. ಶಿಕ್ಷಕರು ಮಾಡಿರುವ ಉತ್ತಮ ಕೆಲಸವನ್ನು ಗುರುತಿಸುವುದು ಸಮಾಜದಲ್ಲಿ ಮುಖ್ಯವಾಗಬೇಕು ಎಂದರು.

ಎಸ್‌ಬಿ ಎಜುಕೇಷನ್‌ ಟ್ರಸ್ಟ್‌ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಮಾತನಾಡಿ, ಸಾಹಿತಿಗಳು ಕೂಡ ಶಿಕ್ಷಕರಿಗೆ ಸಮಾನವಾಗಿದ್ದಾರೆ ಎಂದರೆ ಅತಿಶಯೋಕ್ತಿಯಲ್ಲ, ಅವರೂ ಸಹ ಕೃತಿಗಳನ್ನು ಬರೆದು ಸಮಾಜದಲ್ಲಿ ಗಮನ ಸೆಳೆಯುವ ಕೆಲಸ ಮಾಡುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರನ್ನು ಹಾಗೂ ಶಿಕ್ಷಕ ಪ್ರಶಸ್ತಿ ಪಡೆದವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.

ಮುಖಂಡರಾದ ಕೆ.ಕೆ.ರಾಧಾಕೃಷ್ಣ, ಶೈಕ್ಷಣಿಕ ಪಾಲುದಾರ ಕೆ.ಚೇತನ್‌ಕೃಷ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಮಂಡ್ಯ ತಾಲ್ಲೂಕು ಅಧ್ಯಕ್ಷ ಮುತ್ತೇಗರೆ ಮಂಜು, ನಗರಾಧ್ಯಕ್ಷೆ ಸುಜಾತ ಕೃಷ್ಣ, ಗೌರವ ಕಾರ್ಯದರ್ಶಿಗಳಾದ ದರಸಗುಪ್ಪೆ ಧನಂಜಯ್‌ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!