Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಲೆಗಳಿಗೆ ನೀರು ಹರಿಸುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಕೆ.ಆರ್.ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಒಂದು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ, ಅವರು ಅಚ್ಚಕಟ್ಟು ಪ್ರದೇಶದ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ, ಸರ್ಕಾರ ರೈತರ ಪರ ಇದೆ,ಇದರ ಬಗ್ಗೆ ಆತಂಕ ಬೇಡ, ಮುಂದಿನ ಒಂದು ದಿನದೊಳಗೆ ತೀರ್ಮಾನಿಸಿ ಜನ- ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ಕ್ರಮವಹಿಸುತ್ತೇವೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಪಿ.ಎಂ.ನರೇಂದ್ರಸ್ವಾಮಿ, ರವಿಕುಮಾರ್, ರಮೇಶ್ ಬಾಬು ಬಂಡೀಸಿದ್ದೇಗೌಡ, ಉದಯ್, ಹೆಚ್.ಟಿ.ಮಂಜು, ವಿಧಾನ ಪರಿಷತ್ ಸದಸ್ಯರಾದ ಮಧು. ಜಿ.ಮಾದೇಗೌಡ, ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ