Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಿಎಂ, ಡಿಸಿಎಂ ಪೋಸ್ಟರ್ ಪ್ರದರ್ಶಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ

ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಮಿಳುನಾಡು ವಾಟರ್ ಮ್ಯಾನ್ ರೀತಿ ವರ್ತಿಸುತ್ತಿದ್ದಾರೆಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಆರೋಪಿಸಿ ಪೋಸ್ಟರ್ ಪ್ರದರ್ಶಿಸಿದರು.

ಮಂಡ್ಯದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿಗೆ ನೀರು ಹರಿಸುವ ಮೂಲಕ ಆ ರಾಜ್ಯದ ವಾಟರ್ ಮ್ಯಾನ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಾ, ತಮಿಳುನಾಡಿನ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರೈತ ನಾಯಕಿ ಸುನಂದ ಜಯರಾಮ್, ರೈತಸಂಘದ ಮುಖಂಡರಾದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಕದಂಬ ಸೈನ್ಯದ ಬೇಕರಿ ರಮೇಶ್, ಬಿಜೆಪಿಯ ಸಿ.ಟಿ. ಮಂಜುನಾಥ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!