Sunday, May 19, 2024

ಪ್ರಾಯೋಗಿಕ ಆವೃತ್ತಿ

ನಾಲ್ವರ ಮಹಿಳೆಯರ ಜಲ ಸಮಾಧಿ : ಸಚಿವರಿಂದ ಪರಿಹಾರ ವಿತರಣೆ

ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಬಳಿ‌ ಇರುವ ನಾಲೆಗೆ ಕಾರು ಪಲ್ಟಿ ಹೊಡೆದು ಮೃತಪಟ್ಟವರ ಅಂತಿಮ ದರ್ಶನವನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಪಡೆದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕುಟುಂಬಸ್ಥರಿಗೆ ವೈಯಕ್ತಿಕವಾಗಿ 50,000 ರೂ ಪರಿಹಾರ ವಿತರಿಸಿದರು.

ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದರು.

ಅಪಘಾತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸರಿಗೆ ತಿಳಿಸಲಾಗಿದೆ ಎಂದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತವಾಗುತ್ತಿತ್ತು, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಹಲವಾರು ಸಭೆ ನಡೆಸಿ ಕ್ರಮ ಕೈಗೊಂಡು ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ‌ಶಾಸಕರಾದ ರವಿಕುಮಾರ್, ರಮೇಶ್ ಬಾಬು ಬಂಡೀಸಿದ್ದೇಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಮಿಮ್ಸ್ ನಿರ್ದೇಶಕ ಡಾ: ಮಹೇಂದ್ರ ಉಪಸ್ಥಿತರಿದ್ದರು.

ಸಚಿವ ಡಾ.ಹೆಚ್.ಸಿ ಮಹದೇವಪ್ಪ ಸಾಂತ್ವನ

ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ನಿನ್ನೆ ಗಾಮನಹಳ್ಳಿ ಬಳಿ ನಾಲೆಗೆ ಕಾರು‌ ಪಲ್ಟಿ ಒಡೆದು ಮೃತಪಟ್ಟವರ ಕುಟುಂಬಸ್ಥರನ್ನು ಮಿಮ್ಸ್ ನಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದರು.

ಮೃತ ಪಟ್ಟವರು ಟಿ.ನರಸಿಪುರ ತಾಲ್ಲೂಕಿನವರಾಗಿದ್ದು, ಘಟನೆ ನಡೆದ ತಕ್ಷಣ ಶಾಸಕರಾದ ರಾಮೇಶ್ ಬಾಬು ಬಂಡೀಸಿದ್ದೇಗೌಡ, ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಮುಂದೆ ನಿಂತು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ಜಾಹೀರಾತು

ಘಟನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಮುಖ್ಯಮಂತ್ರಿಗಳು 2 ಲಕ್ಷ ರೂ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು. ಸಚಿವರು ಸಹ ವೈಯಕ್ತಿಕವಾಗಿ ಪರಿಹಾರ ಹಣವನ್ನು ಕುಟುಂಬಸ್ಥರಿಗೆ ವಿತರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!