Monday, November 23, 2026

ಪ್ರಾಯೋಗಿಕ ಆವೃತ್ತಿ

6 ಸಾವಿರ ಹೆಣ್ಣುಮಕ್ಕಳಿಗೆ ‘ಮುಟ್ಟಿನ ಕಪ್’ ವಿತರಣೆ : ಸಿಇಓ ನಂದಿನಿ

ಮಂಡ್ಯ ಜಿಲ್ಲೆಯಾದ್ಯಂತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 6,000 ಹೆಣ್ಣು ಮಕ್ಕಳಿಗೆ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ (CSR) ಅನುದಾನದಡಿ ಮುಟ್ಟಿನ ಕಪ್ ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಿಇಓ ನಂದಿನಿ ಕೆ.ಆರ್. ತಿಳಿಸಿದರು.

ಮಂಡ್ಯ ನಗರದ ಲಕ್ಷೀ ಜನಾರ್ದನ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಮುಟ್ಟಿನ ಕಪ್ ಬಳಕೆ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಗಸ್ಟ್ 15ರೊಳಗೆ ಮುಟ್ಟಿನ ಕಪ್ ಅನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಮಂಡ್ಯ ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ವೈದ್ಯರ ಸಂಘದ ಸಹಕಾರದೊಂದಿಗೆ ಜಿಲ್ಲೆಯ ಎಲ್ಲಾ ಪ್ರೌಢ ಶಾಲೆಗಳಲ್ಲಿ ಮುಟ್ಟಿನ ಕಪ್ ಬಳಕೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ನಂತರದ ದಿನಗಳಲ್ಲಿ ಶಾಲೆಯ ವಿಜ್ಞಾನ ಶಿಕ್ಷಕರು ಅಥವಾ ಮಹಿಳಾ ಶಿಕ್ಷಕರು ಈ ಬಗ್ಗೆ ನಿರಂತರ ಅರಿವು ಮೂಡಿಸಬೇಕು, ಪ್ರತಿ ಶಾಲೆಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಕ ಮಾಡಿ ಮುಟ್ಟಿನ ಕಪ್ ಬಳಕೆಯ ಬಗ್ಗೆ ಎದುರಾಗುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸಮಸ್ಯೆ ಪರಿಹರಿಸಲು ತಿಳಿಸಿದರು.

ಮುಟ್ಟಿನ ಕಪ್ ವಿತರಣೆಯ ನಂತರ ಅರೋಗ್ಯ ಇಲಾಖೆಯ ಎಎನ್ಎಂ ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ನಿರಂತರ ಅನುಸರಣೆ ಮಾಡಬೇಕು ಎಂದು ತಿಳಿಸಿದರು.

ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ವೈದರ ಸಂಘದ ಡಾ.ಮನೋಹರ್ ಆರ್, ಡಾ.ಶಿಲ್ಪಾ, ದಕ್ಕ್ಷಿಣ ವಲಯ ಕ್ಷೇತ್ರ ಶಿಕ್ಷಣಧಿಕಾರಿ ಮಹದೇವ್ ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ