Friday, September 27, 2024

ಪ್ರಾಯೋಗಿಕ ಆವೃತ್ತಿ

ಪೌಷ್ಟಿಕ ಆಹಾರ ವಿತರಣೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಿ: ಚಲುವರಾಯಸ್ವಾಮಿ

ರಾಜ್ಯ ಸರಕಾರದ ಮಹತ್ವದ ಯೋಜನೆಯಾದ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಶಿಕ್ಷಕರು ಎಚ್ಚರವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಾಗಮಂಗಲ ತಾಲ್ಲೂಕಿನ ಪಟ್ಟಣದ ಉಪ್ಪಾರಹಳ್ಳಿ ಶಾಲೆಯಲ್ಲಿ ಮಂಡ್ಯ ಶಿಕ್ಷಣ ಇಲಾಖೆ, ರಾಜ್ಯ ಸರಕಾರದ ಅಕ್ಷರ ದಾಸೋಹ ಯೋಜನೆಯಡಿ ಅಜೀಂ ಪ್ರೇಮ್‌ಜಿ ಫೌಂಡೇಷನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನ ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.

ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಉತ್ತಮ ಮಟ್ಟದ ಪೌಷ್ಟಿಕ ಆಹಾರ ಸಿಗಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರಕಾರ ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಯೋಗದಲ್ಲಿ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ, ಬಾಳೆ ಹಣ್ಣು ಹಾಗೂ ಚುಕ್ಕಿ ವಿತರಿಸುವ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ, ಇದು ದುರುಪಯೋಗವಾಗದಂತೆ ಎಚ್ಚರವಹಿಸಿ, ಗ್ರಾಮಾಂತರ ಪ್ರದೇಶದ ಬಡ ಮಕ್ಕಳಿಗೆ ತಲುಪಬೇಕು ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಎಚ್ಚರವಹಿಸಬೇಕು ಎಂದರು.

ಜಿಲ್ಲಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಸೇರಿ 98,670 ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಬೆಂಗಳೂರಿನ ಅಜೀಂ ಪ್ರೇಮ್‌ಜಿ ಫೌಂಡೇಷನ್ ಸದಸ್ಯರು ಹಾಜರಿದ್ದರು. ಸಚಿವರು, ಗಣ್ಯರು ಹಾಗೂ ಮಕ್ಕಳು ಒಂದೇ ಸಾಲಿನಲ್ಲಿ ಕುಳಿತು ಮಧ್ಯಾಹ್ನದ ಬಿಸಿಯೋಟದ ಜತೆಗೆ ಪೌಷ್ಠಿಕ ಆಹಾರದ ಮೊಟ್ಟೆ, ಬಾಳೆ ಹಣ್ಣು ಮತ್ತು ಚುಕ್ಕಿಯನ್ನು ಸವಿದರು.

ಮಕ್ಕಳು ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಬ್ಯಾಂಡ್ ಸೆಟ್ ಭಾರಿಸುವ ಮೂಲಕ ವೇದಿಕೆಗೆ ಮೆರವಣಿಗೆಯಲ್ಲಿ ಕರೆದುಕೊಂಡು ಹೋದರು. ಶಾಲಾಭಿವೃದ್ಧಿ ಮಂಡಳಿವತಿಯಿಂದ ಸಚಿವರು ಹಾಗೂ ಗಣ್ಯರನ್ನು ಗೌರವಿಸಲಾಯಿತು.

ಮಂಡ್ಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸತೀಶ್, ತಹಶೀಲ್ದಾರ್ ಜಿ.ಆದರ್ಶ, ಪುರಸಭೆ ಸದಸ್ಯೆ ವಸಂತಲಕ್ಷ್ಮಿ, ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಬಿ.ಎಂ.ಪ್ರಕಾಶ್, ಅಶೋಕ್ ಸೇರಿದಂತೆ ಶಾಲಾಭಿವೃದ್ಧಿ ಮಂಡಳಿ ಸದಸ್ಯರು, ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!