Saturday, November 21, 2026

ಪ್ರಾಯೋಗಿಕ ಆವೃತ್ತಿ

ಡಿ.ದೇವರಾಜು ಅರಸು ಜನ್ಮದಿನಾಚರಣೆ : ಸಸಿ ವಿತರಣೆ- ಪ್ರಶಸ್ತಿ ಪ್ರದಾನ

ಕೃಷಿಕ ಲಯನ್ಸ್ ಸಂಸ್ಥೆ, ಸಕ್ಕರೆ ನಾಡು ಲಯನ್ಸ್ ಸಂಸ್ಥೆ, ಮಂಡ್ಯ ಇವರ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಅಂಗವಾಗಿ ತೆಂಗಿನ ಸಸಿ ವಿತರಣಾ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಮಂಡ್ಯ ತಾಲ್ಲೂಕಿನ ಉಮ್ಮಡಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ.ಕೆ.ಟಿ.ಹನುಮಂತು ತೆಂಗಿನ ಸಸಿ ವಿತರಿಸುವ  ಮೂಲಕ ಉದ್ಘಾಟಿಸಿ ಮಾತನಾಡಿ, ಡಿ.ದೇವರಾಜು ಅರಸುರವರ ಜೀವನ ಚರಿತ್ರೆ ಮತ್ತು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಕ್ಕಳಿಗೆ ಉಪನ್ಯಾಸ ನೀಡಿದರು

ಕಾರ್ಯಕ್ರಮದಲ್ಲಿ ಆರ್.ಎ.ಪಿ.ಸಿ.ಎಂ.ಸಿ ಅಧ್ಯಕ್ಷ ಯು.ಸಿ.ಶೇಖರ್, ಎಂ.ಟಿ.ಶ್ರೀ ನಿವಾಸ್, ಕೆ.ಪಿ.ವೀರಪ್ಪ, .ಹೆಚ್.ಆರ್.ಸತೀಶ್, ಕೆ.ಆರ್.ಶಶಿಧರ್, ನೀನಾ ಪಟೇಲ್, ಮುಖ್ಯ ಶಿಕ್ಷಕರಾದ ನಾಗರಾಜು, ರತ್ನಮ್ಮ, ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ