Saturday, May 18, 2024

ಪ್ರಾಯೋಗಿಕ ಆವೃತ್ತಿ

ಜಿಲ್ಲೆಯಲ್ಲಿ ಸಿ.ಇ.ಟಿ. ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿ: ಎಸ್.ಅಶ್ವತಿ

ಜಿಲ್ಲೆಯಲ್ಲಿ ಸಿ.ಇ.ಟಿ. ಪರೀಕ್ಷೆಯು ಜೂನ್ 16 ಮತ್ತು 17 ರಂದು ನಡೆಯಲಿದೆ. ಈ ಬಾರಿ ಸಿ.ಇ.ಟಿ ಪರೀಕ್ಷೆಯನ್ನು 4560 ವಿಧ್ಯಾರ್ಥಿಗಳು ಬರೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮ ಮೂಲಭೂತ ಸೌಕರ್ಯ ಹಾಗೂ ಪೀಠೋಪಕರಣಗಳ ವ್ಯವಸ್ಥೆ ಮಾಡಿ ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2022 ನೇ ಸಾಲಿನ ಸಿ.ಇ.ಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೂನ್16 ಮತ್ತು 17 ರಂದು ಬೆಳಿಗ್ಗೆ 10:30 ರಿಂದ 11:30 ಹಾಗೂ ಮಧ್ಯಾಹ್ನ 02:30 ರಿಂದ 3:50 ರವರಿಗೆ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಮಂಡ್ಯ ನಗರದ ಜಿಲ್ಲೆಯಲ್ಲಿ 08 ಹಾಗೂ.ಆರ್.ಪೇಟೆ ತಾಲ್ಲೂಕಿನ 02 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಂಡ್ಯ ತಾಲ್ಲೂಕಿಗೆ-02 ಹಾಗೂ.ಆರ್.ಪೇಟೆ ತಾಲ್ಲೂಕಿಗೆ-01 ಮಾರ್ಗಧಿಕರುಗಳ ತಂಡ ರಚಿಸಲಾಗಿದೆ.
ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೇ ನಡೆಸಲು ಎ/ಬಿ ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಕ ಮಾಡಿಲಾಗಿದೆ. ಬಹಳ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದರು.

ಸದರಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಇನ್ನಿತರ ಅಗತ್ಯ ಸೌಕರ್ಯಗಳು ಸಮಯಕ್ಕೆ ಸರಿಯಾಗಿ ಒದಗಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದರು. ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಹಾಗೂ ಸುಗಮವಾಗಿ ನಡೆಸಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳನ್ನು ಕುರಿತು ಸವಿವರವಾದ ಎಸ್.ಓ.ಪಿ ಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಜಾರಿಗೊಳಿಸಿರುತ್ತದೆ. ಅದರಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.

ಪರೀಕ್ಷೆಗಳನ್ನು ಯಥಾಕ್ರಮದಂತೆ ಜರುಗಿಸಲು ಆಯಾ ಪರೀಕ್ಷಾ ಕೇಂದ್ರಗಳ ಉಪಮುಖ್ಯ ಅಧೀಕ್ಷಕರುಗಳಿಗೆ ಸವಿವರವಾದ ಮಾರ್ಗಸೂಚಿಯನ್ನು ಕಳುಹಿಸಲಾಗಿದೆ. ಹಾಗೂ ಕಾಲಕಾಲಕ್ಕೆ ಅಗತ್ಯ ಮಾರ್ಗದರ್ಶನಗಳನ್ನು ಒದಗಿಸಲು ಇಲಾಖೆಯ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಯನ್ನು ತೆರೆಯುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ವಾಚ್, ಮೊಬೈಲ್ ಹಾಗೂ ಇತ್ಯಾದಿ ಇಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಪರೀಕ್ಷೆಯು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಲಾಗಿದೆ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್. ಉಮೇಶ್,ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!