Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಕಾರ್ಖಾನೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ; ಪರಿಶೀಲನೆ

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಗಳವಾರ ಮೈಷುಗರ್ ಸಕ್ಕರೆ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿ ಸಕ್ಕರೆ ಯಾಡ್೯ನಲ್ಲಿ ರೈತರಿಗೆ ಕಲ್ಪಿಸಿರುವ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ರೈತರಿಗೆ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಂಡ ಜಿಲ್ಲಾಧಿಕಾರಿಗಳು ಕ್ಯಾಂಟೀನ್ ತೆರೆಯಲು ಆಸಕ್ತಿ ಹೊಂದಿರುವವರಿಗೆ ಅವಕಾಶ ನೀಡುವಂತೆ ತಿಳಿಸಿದರು.

ಕಬ್ಬಿನ ಹಾಲು ವ್ಯರ್ಥವಾಗುತ್ತಿದೆ ಎಂಬ ದೂರುಗಳ ಬಗ್ಗೆ ಪರಿಶೀಲಿಸಿದಾಗ ಪೈಪ್ ಲೈನ್ ದುರಸ್ತಿಯಿಂದ ಹೊರಬರುತ್ತಿದ್ದು, ಅದನ್ನು ಸಂಗ್ರಹಿಸಿ ವ್ಯರ್ಥವಾಗದಂತೆ ಕ್ರಮಕೈಗೊಂಡಿರುವ ಬಗ್ಗೆ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಸ್ಪಷ್ಠನೆ ನೀಡಿದರು.

ಪ್ರತಿ ದಿನ ಕಬ್ಬು ಹರಿಯುವಿಕೆ ಕುರಿತಂತೆ ಸೂಚನಾ ಪಲಕದಲ್ಲಿ ಅನಾವರಣ ಕುರಿತು ಹಾಗೂ ರೈತರಿಗೆ ಮಾಹಿತಿ ನೀಡಲು ಸಿಬ್ಬಂದಿ ನಿಯೋಜಿಸಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರತಿದಿನ 2500 ಮೆಟ್ರಿಕ್ ಟನ್ ಕಬ್ಬು ಹರಿಯುವ ರೀತಿ ಕೆಲಸ ನಿರ್ವಹಿಸುವಂತೆ ಈಗಾಗಲೇ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಯಂತ್ರಗಳನ್ನು ಸುಸ್ಥಿತಿಯಲ್ಲಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಸಣ್ಣ ಪುಟ್ಟ ರಿಪೇರಿ ಇದ್ದಲ್ಲಿ ಕೂಡಲೇ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಬ್ಬು ಕಟಾವು ಮಾಡಲು ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಕಾರ್ಮಿಕರು ಆಗಮಿಸಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪರಿಶೀಲನೆ ವೇಳೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ. ಗಂಗಾಧರ್, ವ್ಯವಸ್ಥಾಪಕ ನಿರ್ದೇಶಕ ಮಂಗಲ್ ದಾಸ್, ಮುಖ್ಯ ಇಂಜಿನಿಯರ್ ವಿರೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ