Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ; ಪರಿಶೀಲನೆ

ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಗೆ ನೂತನ ಜಿಲ್ಲಾಧಿಕಾರಿ ಡಾ.ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸುವ ಕೆಲಸಗಳು ತ್ವರಿತಗತಿಯಲ್ಲಿ ನಡೆಯಬೇಕು. ಆರ್ ಆರ್ ಟಿ ವಿಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿ ಕಡತಗಳ ರಾಶಿಗಳನ್ನು ನೋಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಲ್ಲದೆ ಬಾಕಿ ಇರುವ ಕಡಿತಗಳನ್ನು ಪರಿಶೀಲನೆ ನಡೆಸಿದರು.

ನಂತರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅನುಕೂಲ ಮಾಡಬೇಕೆಂದು ಹೇಳಿದರು. ಇದೇ ವೇಳೆ ತಾಲ್ಲೂಕು ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ತಹಸೀಲ್ದಾರ್ ಲೋಕೇಶ್, ಗ್ರೇಡ್ – 2 ತಹಶೀಲ್ದಾರ್ ಕುಮಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!