Thursday, September 19, 2024

ಪ್ರಾಯೋಗಿಕ ಆವೃತ್ತಿ

ಜಿಲ್ಲಾ ನ್ಯಾಯಾಲಯದ 13 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕ – Belagavi District Court

ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3

ಒಟ್ಟು ಹುದ್ದೆಗಳು -13

ಅರ್ಜಿ ಸಲ್ಲಿಸುವ ಬಗೆ : ಅನ್ಲೈನ್

ವಿದ್ಯಾರ್ಹತೆ: ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜಾಹೀರಾತು

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನಶ್ರೇಣಿ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:  ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳಿಗೆ ರೂ. 300, ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು )

ಆಯ್ಕೆ ವಿಧಾನ: ಶೀಘ್ರ ಲಿಪಿಗಾರರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿ ಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟುಗಳ ಸರಾಸರಿ ಆಧಾರದ ಮೇಲೆ ಮೆರಿಟ್‌ವೈಸ್ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 21, 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2023

ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ

ಅನ್ ಲೈನ್ ಅರ್ಜಿಇಲ್ಲಿ ಕ್ಲಿಕ್ ಮಾಡಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!