Thursday, September 19, 2024

ಪ್ರಾಯೋಗಿಕ ಆವೃತ್ತಿ

ಹನಿಟ್ರ್ಯಾಪ್ ಸುಲಿಗೆ ಪ್ರಕರಣ| ಟಿವಿ ನಿರೂಪಕಿ ದಿವ್ಯ ವಸಂತ ಅರೆಸ್ಟ್

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ ಎಂದು ಹೇಳಿ ವೈರಲ್‌ ಆಗಿದ್ದ ಆ್ಯಂಕರ್ ದಿವ್ಯ ವಸಂತ ಈಗ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ರಾಜ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಪ್ರಕರಣದಲ್ಲಿ ಸಿಲುಕಿರುವ ದಿವ್ಯ ಈ ಪೊಲೀಸರ ಅಥಿತಿಯಾಗಿದ್ದಾಳೆ.

ಕೇಸ್ ಬೆಳಕಿಗೆ ಬರುತ್ತಿದ್ದಂತೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!