Wednesday, November 18, 2026

ಪ್ರಾಯೋಗಿಕ ಆವೃತ್ತಿ

”ವೀಕೆಂಡ್ ವಿತ್ ರಮೇಶ್” ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ವಾರದ ಜೀ ಟಿವಿಯ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ ಅತಿಥಿಯಾಗಲಿದ್ದಾರೆ. ರಾಜಕೀಯ ರಂಗದಲ್ಲಿ ಕನಕಪುರದ ಬಂಡೆ ಎಂದೇ ಹೆಸರಾಗಿರುವ ಡಿಕೆ ಶಿವಕುಮಾರ್ ಅವರ ವರ್ಣರಂಜಿತ ರಾಜಕೀಯ ಜೀವನ ಈ ಕಾರ್ಯಕ್ರಮದಲ್ಲಿ ಅನಾವರಣವಾಗಲಿದೆ.

“>

‘ವೀಕೆಂಡ್ ವಿತ್ ರಮೇಶ್’ ವೇದಿಕೆ ಮೇಲೆ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್, ಮಗಳು ಐಶ್ವರ್ಯಾ ಶಿವಕುಮಾರ್ ಮೊದಲಾದವರು ಆಗಮಿಸುವರು.  ‘ಹೊರಗಡೆ ಅವರು ಟಫ್ ಮ್ಯಾನ್. ಮನೆಯಲ್ಲಿ ಸಖತ್ ಎಮೋಷನಲ್. ಅವರು ನನ್ನ ಹೀರೋ’ ಎಂದು ಐಶ್ವರ್ಯಾ ಹೇಳಿಕೊಂಡಿದ್ದಾರೆ. ಸಿಹಿ ಕಹಿ ಚಂದ್ರು ಕೂಡ ವೇದಿಕೆ ಏರಿದ್ದು, ‘ಏನೇ ಆದರೂ ಶಿವಕುಮಾರ್ ಇರ್ತಾರೆ ಅನ್ನೋ ಗ್ಯಾರಂಟಿ’ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಡಿಕೆಶಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಪ್ರೋಮೋ ವೈರಲ್ ಆಗಿದೆ. ಆರನೇ ಕ್ಲಾಸ್​ನಲ್ಲೇ ರಾಜಕಾರಣಿ ಆಗಬೇಕು ಎನ್ನುವ ಕನಸನ್ನು ಡಿಕೆಶಿ ಕಂಡಿದ್ದರು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರ ಕುಟುಂಬದ ಸದಸ್ಯರು ಹಾಗೂ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜಕೀಯ ನಾಯಕರು, ಬಾಲ್ಯ ಸ್ನೇಹಿತರು ಕಾಣಿಸಿಕೊಳ್ಳಲಿದ್ಧಾರೆ.  ‘ವೀಕೆಂಡ್ ವಿತ್ ರಮೇಶ್ ಸೀಸನ್​ 5’ರ ಕೊನೆಯ ಅತಿಥಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ.

‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ ಮಾರ್ಚ್​ ತಿಂಗಳಲ್ಲಿ ಆರಂಭ ಆಯಿತು. ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು. ನಂತರ ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ, ಡಾಕ್ಟರ್​ ಮಂಜುನಾಥ್, ಹಿರಿಯ ನಟ ದತ್ತಣ್ಣ, ಅವಿನಾಶ್, ಮಂಡ್ಯ ರಮೇಶ್, ಸಿಹಿ ಕಹಿ ಚಂದ್ರು, ನೆನಪಿರಲಿ ಪ್ರೇಮ್ ಮೊದಲಾದವರು ಬಂದು ಸಾಧಕರ ಚೇರ್ ಮೇಲೆ ಕುಳಿತಿದ್ದಾರೆ. ಈಗ ಡಿಕೆ ಶಿವಕುಮಾರ್ ಅವರ ಬದುಕಿನ ಸಂಪೂರ್ಣ ಚಿತ್ರಣ ಅನಾವರಣಗೊಳ್ಳಲಿದೆ.

‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮ ನನ್ನ ಬದುಕಿನ ಪಯಣವನ್ನು ಪ್ರಪಂಚಕ್ಕೆ ಪರಿಚಯಿಸುವ ಪ್ರಯತ್ನ ಮಾಡಿದೆ. ಇದೇ ಶನಿವಾರ ಹಾಗೂ ಭಾನುವಾರ ನನ್ನ ಬಾಲ್ಯದಿಂದ ಇಲ್ಲಿಯವರೆಗಿನ ಪಯಣದ ಸ್ವಾರಸ್ಯಕರ ಕಥೆಯೊಂದಿಗೆ ನಿಮ್ಮ ಮುಂದೆ ಬರುತ್ತಿದ್ದೇನೆ ಎಂದು ಸ್ವತಃ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ