Wednesday, November 18, 2026

ಪ್ರಾಯೋಗಿಕ ಆವೃತ್ತಿ

ಅಕ್ಕಿ ಜೊತೆ ಹಣ ನೀಡಿ ಎಂದವರು ಈಗ ಮಾತು ಬದಲಿಸಿದ್ದಾರೆ – ಬಿಜೆಪಿ ವಿರುದ್ದ ಹರಿಹಾಯ್ದ ಡಿ.ಕೆ.ಶಿವಕುಮಾರ್

ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಕೃಪಾ ಅತಿಥಿ ಗೃಹದ ಬಳಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ನೀಡಿದರು.

”ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ. ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ” ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದರು.

ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ಬಹಳ ಸಂತೋಷ… ಪ್ರತಿಭಟನೆ ಮಾಡಬೇಕು… ನಾವು ಅವರನ್ನು ತಡೆಯುವುದಿಲ್ಲ. ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಹೇಳಿದ್ದೇನೆ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ” ಎಂದರು.

”ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಗೋದಾಮಿನಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರು ಬಡವರಿಗೆ ನೀಡದೆ ರಾಜಕಾರಣ ಮಾಡುತ್ತಿದ್ದಾರೆ. ಇದೆಲ್ಲವೂ ಜನರಿಗೆ ಗೊತ್ತಿದೆ” ಎಂದು ಹೇಳಿದರು.

”ನಾವು ದೀರ್ಘಾವಧಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಿಗದಿ ಮಾಡಿರುವ ಮೊತ್ತಕ್ಕೆ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ನಮ್ಮ ರಾಜ್ಯದಲ್ಲಿ ಅಕ್ಕಿ ಬೆಳೆದು ಈ ಮೊತ್ತಕ್ಕೆ ನೀಡಿದರೆ ಅವರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ. ನಮಗೆ ಕೆಲ ರಾಜ್ಯದವರು ಒಂದೆರಡು ತಿಂಗಳು ಅಕ್ಕಿ ಪೂರೈಸಲು ಮುಂದಾಗಿದ್ದರು. ನಮಗೆ ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ಬೇಕು. ನಾವು ಆರಂಭದಲ್ಲಿ ಅಕ್ಕಿ ನೀಡಿ ನಂತರ ಅದನ್ನು ನಿಲ್ಲಿಸುವಂತೆ ಆಗಬಾರದು. ಹೀಗಾಗಿ ಬಿಜೆಪಿ ನಾಯಕರು ಕೊಟ್ಟಿರುವ ಸಲಹೆಯಂತೆ ಈಗ ಹಣ ನೀಡಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿ, ”ಬಿಜೆಪಿಯವರ ಬಾಯಿಗೆ ನಾವು ಹಿಂದೆಯೂ ಬೀಗ ಹಾಕಿಲ್ಲ. ಈಗಲೂ ಹಾಕುವುದಿಲ್ಲ. ಅವರ ಅನುಭವ, ನುಡಿಮುತ್ತುಗಳನ್ನು ಜನರಿಗೆ ತಿಳಿಸುತ್ತಿದ್ದಾರೆ” ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ