Thursday, September 19, 2024

ಪ್ರಾಯೋಗಿಕ ಆವೃತ್ತಿ

ಮುನಿರತ್ನ ಬಗ್ಗೆ ಒಕ್ಕಲಿಗ ಸ್ವಾಮೀಜಿಗಳು, ನಾಯಕರು ಮಾತಾಡಲಿ: ಡಿ.ಕೆ.ಶಿವಕುಮಾರ್

ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು ಮಾತನಾಡಬೇಕು. ಅದರ ಬಗ್ಗೆ ಆರ್ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾ‌ರ್ ಹೇಳಿದರು.

ಅಮೆರಿಕ ಪ್ರವಾಸದಿಂದ ಮರಳಿರುವ ಅವರು, ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಶಾಸಕ ಮುನಿರತ್ನ ಅವಹೇಳನ ಬಗ್ಗೆ ಮಾತನಾಡಲು ದೊಡ್ಡ ದೊಡ್ಡ ನಾಯಕರಿದ್ದಾರೆ. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಮಾತನಾಡುವುದು ಸೂಕ್ತ ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು” ಎಂದು ಒತ್ತಾಯಿಸಿದರು.

ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮ್ಮರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹುದ್ದೆ ಹೊಂದಿರುವ ಆರ್ ಅಶೋಕ್, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲಿ”ಎಂದರು.

ರಾಹುಲ್ ಗಾಂಧಿ ಅವರ ಭೇಟಿಗೆ ಯಾರ ಅನುಮತಿ ಬೇಕು?

ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರ ಭೇಟಿ ಹಾಗೂ ಚರ್ಚೆಯ ವಿಚಾರದ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ನಿಮಗೆ (ಮಾಧ್ಯಮದವರಿಗೆ) ಹೇಳಲಾಗುತ್ತದೆಯೇ? ನನ್ನ ತಮ್ಮ ಹೆಂಡತಿ ಮತ್ತು ಸ್ವಾಮೀಜಿಯವರ ಬಳಿ ಏನು ಮಾತನಾಡುತ್ತೇನೆ ಎಂಬುದನ್ನು ನಿಮ್ಮ ಬಳಿ ಹೇಳಲು ಆಗುತ್ತದೆಯೇ?” ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!