Thursday, September 19, 2024

ಪ್ರಾಯೋಗಿಕ ಆವೃತ್ತಿ

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಯುವಕನ ಹತ್ಯೆ : ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಡಿ.ಕೆ.ಶಿವಕುಮಾರ್ ಆಗ್ರಹ

ದೇಶದ ಭವಿಷ್ಯ ಉಜ್ವಲಗೊಳಿಸಬೇಕಾದ ಯುವಕರಿಗೆ ಆಯುಧಗಳನ್ನು ನೀಡಿ ಅವರ ಭವಿಷ್ಯವನ್ನು ಬಿಜೆಪಿ ಹಾಳುಗೆಡವಿದೆ. ಶಿಕ್ಷಿತ ಸಮಾಜದಲ್ಲಿ ಕಾನೂನನ್ನು ಕೈಗೆ ತೆಗೆದುಕೊಳ್ಳುವ ನೈತಿಕ ಪೊಲೀಸ್ ಗಿರಿಯನ್ನು ಪ್ರೋತ್ಸಾಹಿಸುವುದು ಮತಿಗೇಡಿತನ. ಈ ಘಟನೆಯ ಹೊಣೆ ಹೊತ್ತು ಗೃಹ ಸಚಿವ ಆರಗೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

“>

ಬಿಜೆಪಿ ಆಡಳಿತದಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಾತನೂರು ಘಟನೆ ಸಾಕ್ಷಿಯಾಗಿದೆ. ಧರ್ಮಾಧಾರಿತ ರಾಜಕಾರಣ, ನೈತಿಕ ಪೊಲೀಸ್‌ಗಿರಿಯ ಹೆಸರಿನಲ್ಲಿ ಹತ್ಯೆಗಳು ಈ ಸರ್ಕಾರವನ್ನು ಮುಂದುವರಿಸಲು ಬಿಟ್ಟರೆ ಅದು ಎಷ್ಟು ಕೆಟ್ಟದಾಗಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂದು ಅವರು ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ.

ಕಳೆದ ಭಾನುವಾರ ರಾತ್ರಿಯಷ್ಟೆ ಕನಕಪುರ ತಾಲ್ಲೂಕಿನ ಸಾತನೂರು ಬಳಿ ಇದ್ರೀಸ್ ಪಾಷಾ ಎಂಬ ಯುವಕನನ್ನು ಪುನೀತ್ ಕೆರೆಹಳ್ಳಿ ಸೇರಿದಂತೆ ಮತ್ತವನ ಸಹಚರರು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆನ್ನಲಾಗಿದ್ದು, ಈ ಬಗ್ಗೆ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!