ಭಾರತೀಯ ಸಂಸ್ಕೃತಿ ಮಹಿಳೆಯರನ್ನು ಪೂಜಿಸುವ ಸಂಸ್ಕೃತಿ. ನಾವು ನಮ್ಮ ದೇಶವನ್ನು ಭಾರತ ಮಾತೆ ಎಂದು ಕರೆಯುತ್ತೇವೆ. ಮಹಿಳೆಯರನ್ನು ಅಪಮಾನ ಮಾಡುವುದು, ನೆಹರೂ ಕುಟುಂಬವನ್ನು ಟೀಕಿಸುವುದು ಬಿಜೆಪಿಯವರ ಚಾಳಿ. ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ವಿಧವೆ ಎಂದು ನೀವೇ ಕರೆದಿದ್ದಿರಿ, ಇದೇ ನಿಮ್ಮ ಸಂಸ್ಕೃತಿಯಾ ಪ್ರಧಾನಿಗಳೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದು ಬಿಜೆಪಿ ಶಾಸಕ ಯತ್ನಾಳ್ ಅವರು ಇಡೀ ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ.
ಯತ್ನಾಳ್ ಅವಹೇಳನಕಾರಿ ಹೇಳಿಕೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕ್ಷಮೆ ಕೇಳಬೇಕು.
ಜೆಪಿ ನಡ್ಡಾ ಅವರು ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು.
– @DKShivakumar pic.twitter.com/2jD35IVx1z— Karnataka Congress (@INCKarnataka) April 28, 2023
“>
ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದು ಬಿಜೆಪಿ ಶಾಸಕ ಯತ್ನಾಳ್ ಅವರು ಇಡೀ ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಯತ್ನಾಳ್ ಅವಹೇಳನಕಾರಿ ಹೇಳಿಕೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕ್ಷಮೆ ಕೇಳಬೇಕು. ಜೆಪಿ ನಡ್ಡಾ ಅವರು ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.




