Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ ಆಚರಣೆ: ಕಾಂಗ್ರೆಸ್ಸಿಗರಿಂದ ಶುಭ ಹಾರೈಕೆ

ರಾಜ್ಯ ಕಾಂಗ್ರೆಸ್ ಪಕ್ಷದ ಆಧಾರ ಸ್ಥಂಭವಾಗಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನ ಲಭಿಸುವ ಅವಕಾಶ ಸಿಗಲಿ ಎಂದು ನಗರಸಭೆ ಹಿರಿಯ ಸದಸ್ಯ  ಟಿ.ಕೆ.ರಾಮಲಿಂಗಯ್ಯ ಅಭಿಪ್ರಾಯಪಟ್ಟರು.

ಮಂಡ್ಯ ನಗರದ ಮಿಮ್ಸ್ ಆವರಣದಲ್ಲಿರುವ ಮಮತೆಯ ಮಡಿಲು ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ಡಿ. ಕೆ ಶಿವಕುಮಾರ್ ಅಭಿಮಾನಿಗಳ ಬಳಗ ಆಯೋಜಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬ ಪ್ರಯುಕ್ತ ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಅವರ ಸಂಬಂಧಿಕರಿಗೆ ಬೆಳಗಿನ ಉಪಹಾರ ಹಾಗೂ ಗಂಜಿ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಡಿ.ಕೆ.ಶಿವಕುಮಾರ್ ಅವರು ಮುಖ್ಯ ಕಾರಣಕರ್ತರಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ ಅವರಿಗೆ ಆಯಸ್ಸು,ಆರೋಗ್ಯ ಭಾಗ್ಯವನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ಮಂಡ್ಯ ಜಿಲ್ಲೆಯ ಜನತೆಯ ಪರವಾಗಿ ಪ್ರಾರ್ಥಿಸಿದರು.

ಡಿ.ಕೆ ಶಿವಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕಾರ್ತಿಕ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಸ್ವರ್ಣಸಂದ್ರದಲ್ಲಿರುವ ಪ್ರೇರಣ ಅಂಧರ ಶಾಲೆಯ ಮಕ್ಕಳಿಗೂ ಸಹ ಸಿಹಿ ಹಾಗೂ ಊಟ ವಿತರಿಸಿದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ರಾಜಕೀಯ ಭವಿಷ್ಯ ಉಜ್ವಲಗೊಂಡು, ರಾಜ್ಯ ಮುಖ್ಯಮಂತ್ರಿಯಾಗಿಲಿ, ಕೇಂದ್ರ ಸರ್ಕಾರ ರಚನೆಯಾದರೆ ಕೇಂದ್ರದ ಮಂತ್ರಿಯೂ ಆಗಲಿ, ಇವರ ನೇತೃತ್ವದಲ್ಲಿ ನಾಡಿ ಜನತೆಗೆ ಉತ್ತಮ ಯೋಜನೆಗಳು ಲಭ್ಯವಾಲಿ ಎಂದು ನುಡಿದರು.

ಮಂಡ್ಯ ನಗರದ ಕಾಳಿಕಾಂಭ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆಯುಸ್ಸು, ಆರೋಗ್ಯ ವೃದ್ದಿಯಾಗಿ, ರಾಜಕೀಯ ಜೀವನ ನೆಮ್ಮದಿಯಾಗಿರಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಲಕ್ಷ್ಮಿಕಾಂತ್, ಶ್ರೀಕಾಂತ್, ಮಧುಸೂದನ್, ಶ್ರೀನಿವಾಸ್, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದ ಮಂಗಲ ಯೋಗೇಶ್ ಸೇರಿದಂತೆ ಇತರರು ಭಾಗವಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ