ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ಗೌಡಹಳ್ಳಿ ಬಳಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಇಂದು ಸಂಜೆ ಅಪಘಾತಕ್ಕೀಡಾಗಿದೆ.
ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ಭಾವವಹಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿವೆ. ಡಿಕೆ ಶಿವಕುಮಾರ್ ಅವರಿದ್ದ ಕಾರು ಹಿಂದೆ ಇದ್ದ ಕಾರಣ ಅವರಿಗೆ ತೊಂದರೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕೆ ಶಿವಕುಮಾರ್ ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದರು.
ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಶ್ರೀರಂಗಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶ್ರೀರಂಗಪಟ್ಟಣ ಸಮೀಪದ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂ-ಮೈ ಎಕ್ಸ್‌ಪ್ರೆಸ್ ಹೈವೆಯಲ್ಲಿ ಈ ಘಟನೆ ಸಂಭವಿಸಿದೆ. ಮೈಸೂರಿನಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿಕೆ ಶಿವಕುಮಾರ್ ಅವರ ಬೆಂಗಾವಲಿನ ಕಾರು ಪಲ್ಟಿಯಾಗಿದೆ.
ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಹಿನ್ನೆಲೆ, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.




