Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಕ್ಕೆ ತೆರಿಗೆ ಹಂಚಿಕೆ ತಾರತಮ್ಯ| ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಡಿ.ಕೆ.ಸುರೇಶ್

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಪಾವತಿಸುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವಾ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಅಗಾಗ ಕೇಳಿಬರುತ್ತದೆ. ಆದರೆ ಈಗ ಈ ವಿಷಯವಾಗಿ ಸಂಸದ ಡಿ ಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತದಲ್ಲಿ ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.

ಡಿ ಕೆ ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋದರರು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್,  ಸುರೇಶ್ ಅವರು ಹೇಳಿರುವುದು ಜನರ ಅಭಿಪ್ರಾಯವಾಗಿದೆ. ನಾನು ಅಖಂಡ ಭಾರತದ ಪರ. ಅವರು ಜನರ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಜನರು ಭಾವಿಸಿದ್ದಾರೆ.ಇಡೀ ದೇಶ ಒಂದಾಗಿದ್ದರೂ ಜನರಿಗೆ ಅನ್ಯಾಯವಾಗುತ್ತಲೇ ಇದೆ. ಅದನ್ನೇ ಸುರೇಶ್ ಹೇಳಿದ್ದಾರೆ. ಭಾರತ ಒಟ್ಟಾಗಿ ಒಂದಾಗಿರಬೇಕು.ನಾವೆಲ್ಲರೂ ಒಂದು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ನಾವು ಒಂದು. ಪ್ರತಿ ಗ್ರಾಮಕ್ಕೂ ನ್ಯಾಯ ಒದಗಿಸಬೇಕಿದೆ”

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!