Thursday, September 19, 2024

ಪ್ರಾಯೋಗಿಕ ಆವೃತ್ತಿ

ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡಿ: ಪಿ.ಎಂ.ನರೇಂದ್ರ ಸ್ವಾಮಿ

ಮಳವಳ್ಳಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದವರು, ಅಭಿವೃದ್ಧಿ ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದ ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡಬೇಕೆಂದು ಮಾಜಿ ಸಚಿವ ನರೇಂದ್ರಸ್ವಾಮಿ ಕರೆ ನೀಡಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡದವರು ಕ್ಷೇತ್ರವನ್ನು ಅಭಿವೃದ್ದಿ ಮಾಡಿದ್ದೀನಿ ಎಂದು ಮಾತನಾಡುತ್ತಾರೆ.

ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಸುಳ್ಳಿನ ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಜನರಿಗೆ ಸತ್ಯ ತಿಳಿಸಬೇಕು ಎಂದರು. ಜಿಲ್ಲೆಯಲ್ಲಿಯೇ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ.

37 ಬೂತ್‌ಗಳಲ್ಲಿ ಕಡಿಮೆಯಾಗಿರುವ ಸದಸ್ಯತ್ವವನ್ನು ಹೆಚ್ಚು ಮಾಡಲು ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರು ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ತಿಳಿಸಿದರು. ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಸದಸ್ಯತ್ವ ಪಡೆದ 18 ರಿಂದ 30 ವರ್ಷದೊಳಗಿನ ಯುವಕರಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು.

ಜೊತೆಗೆ ಆರೋಗ್ಯ ಶಿಬಿರ, ಉದ್ಯೋಗ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದಾಗಿ ತಿಳಿಸಿದರು. ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ದೊಡ್ಡ ಪಕ್ಷವಾಗಿದೆ.

ಸಾಮಾಜಿಕ ಜಾಲತಾಣ, ಮಾಧ್ಯಮವನ್ನು ಸಮರ್ಪಕವಾಗಿ ಬಳಸಿಕೊಂಡು ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ದ ಮಾತನಾಡಿ, ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಿಂದ ಗ್ರಾಮ ಪಂಚಾಯಿತಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಸುಂದರರಾಜು, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯೆ ಸುಜಾತ ಕೆ.ಎನ್‌.ಪುಟ್ಟು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸಿ. ಮಾಧು, ಯೂತ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಚೌಡಪ್ಪ, ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!