Thursday, May 16, 2024

ಪ್ರಾಯೋಗಿಕ ಆವೃತ್ತಿ

ಬಡಜನರ ಅಲೆಸದೆ ಅವರ ಕೆಲಸ ಆದಷ್ಟು ಬೇಗ ಮಾಡಿ ಕೊಡಿ

ಬಡಜನರ ಕೆಲಸಗಳನ್ನು ಮಾಡಿಕೊಡಲು ತಮ್ಮ ಕಛೇರಿಗಳಿಗೆ ಅಲೆಸುವುದನ್ನ ಬಿಟ್ಟು ಆದಷ್ಟು ಬೇಗ ಅವರ ಕೆಲಸ ಮಾಡಿ ಕೊಡಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದ ಬಿಜಿಎಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆ ನೌಕರರ ಸಂಘ, ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಸಹಾಯಕರ ಸಂಘದ ವತಿಯಿಂದ ನಡೆದ ಕಂದಾಯ ದಿನಾಚರಣೆ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಕೆಳಮಟ್ಟದ ಅಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡಿದರೆ, ಮೇಲ್ವರ್ಗದ ಅಧಿಕಾರಿಗಳು ಉತ್ತಮ ವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಇಂದು ಸರ್ಕಾರದ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಇದರಿಂದ ಜನರು ಸರ್ಕಾರದ ಅಧಿಕಾರಿಗಳ ಬಗ್ಗೆ ಬೇಸರಗೊಂಡಿದ್ದಾರೆ. ಆದ್ದರಿಂದ ಅಧಿಕಾರಿಗಳು ಜನಸಾಮಾನ್ಯರ ಕೆಲಸಗಳನ್ನು ಆದಷ್ಟು ಬೇಗ ಮಾಡಿಕೊಡುವ ಮೂಲಕ ಅವರ ವಿಶ್ವಾಸ ಗಳಿಸಬೇಕೆಂದರು.

ಗ್ರಾಮ ಸಹಾಯಕರುಗಳು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅವರು ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿ ಉನ್ನತ ಹುದ್ದೆ ಪಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ, ಜಿಲ್ಲಾ ಧಿಕಾರಿ ಅಶ್ವಥಿ, ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಮಂಡ್ಯ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು, ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಎನ್. ಮಧುಸೂದನ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!