Tuesday, November 24, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ ದಸರಾ ಈ ಬಾರಿ ಎಷ್ಟು ದಿನ ಗೊತ್ತಾ…!

ಈ ಬಾರಿ ಶ್ರೀರಂಗಪಟ್ಟಣ ದಸರಾ 7 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2022 ರ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆಪ್ಟ್ಂಬರ್ ಕೊನೆಯ ವಾರದಲ್ಲಿ ಈ ಬಾರಿ 7 ದಿನಗಳ ಕಾಲ ಆಚರಿಸಲು ಉದ್ದೇಶಿಸಲಾಗಿದೆ.ಮಕ್ಕಳ ದಸರಾ, ಮಹಿಳಾ ದಸರಾ, ಯೋಗ ದಸರಾ, ರೈತ ದಸರಾ, ಕ್ರೀಡಾ ದಸರಾ, ಯುವ ದಸರಾ, ಉದ್ಯೋಗ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಧಿಕಾರಿಗಳು ವಿನೂತನವಾಗಿ ಕಾರ್ಯಕ್ರಮ ಆಯೋಜಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಎಂದರು.

ಹಾಲು ಕರೆಯುವ ಸ್ಪರ್ಧೆ,ಕಬ್ಬಡಿ, ಕೋಕೋ, ಚೆಸ್, ವಾಲಿಬಾಲ್, ವಾಟರ್ ಸ್ಪೋರ್ಟ್ಸ್, ವಿಚಾರ ಗೋಷ್ಠಿಗಳು, ಕವಿಗೋಷ್ಠಿ ವಿಶೇಷವಾಗಿ ದೀಪಾಲಂಕಾರ, ಕೆ.ಆರ್.ಎಸ್. ಬೋಟಿಂಗ್, ಟೂರಿಸಂ ಮ್ಯಾಪ್, ಶೈಕ್ಷಣಿಕ ಪೂಜಾ ಕುಣಿತ ಸೇರಿದಂತೆ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಹುದು. ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಎಲ್.ನಾಗರಾಜು,ಜಿ.ಪಂ.ಸಿಇಒ ಶಾಂತ ಎಂ. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ,ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಆರ್. ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ