Friday, September 20, 2024

ಪ್ರಾಯೋಗಿಕ ಆವೃತ್ತಿ

ಮಿಮ್ಸ್ ರೋಗಿಗಳ ಜೊತೆ ಬರುವವರಿಗೆ ಡಾರ್ಮೆಟರಿ: ಡಾ.ಕುಮಾರ

ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್)ಗೆ ಸಿ.ಎಸ್.ಆರ್ ಅನುದಾನದಡಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಸೋಮವಾರ ಮಿಮ್ಸ್ ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಿಮ್ಸ್ ನಲ್ಲಿ ರೋಗಿಗಳನ್ನು ನೋಡಿಕೊಳ್ಳಲು ಬರುವ ಕೇರ್ ಟೇಕರ್ಸ್ ಆಸ್ಪತ್ರೆ ಆವರಣ ಹಾಗೂ ರಸ್ತೆ ಬದಿಯಲ್ಲಿ ಕುಳಿತುಕೊಳ್ಳುವುದು, ವಿಶ್ರಾಂತಿ ಪಡೆಯುತ್ತಿದ್ದು, ಅವರಿಗೆ ಡಾರ್ಮೆಟರಿಯ ಅವಶ್ಯಕತೆ ಹಾಗೂ ಶೌಚಾಲಯದ ಅಗತ್ಯತೆ ಇದೆ ಎಂದರು.

30 ಲಕ್ಷ ಸಿ‌ಎಸ್.ಆರ್ ಅನುದಾನದಲ್ಲಿ ಡಾರ್ಮೆಟರಿ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, 15 ದಿನದಲ್ಲಿ ಕಟ್ಟಡ ನಿರ್ಮಾಣದ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಮಿಮ್ಸ್ ಅಧೀಕ್ಷಕ ಡಾಃ ಪಿ.ವಿ ಶ್ರೀಧರ್ ಮಾತನಾಡಿ ಮಿಮ್ಸ್ ನಲ್ಲಿ ಹೊರ ರೋಗಿ ವಿಭಾಗದಲ್ಲಿ 5 ಸಾವಿರಕ್ಕೂ ಹೆಚ್ಚಿನ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಇದಲ್ಲದೇ ಅಂದಾಜು 150 ಜನರು ಆಸ್ಪತ್ರೆಗೆ ದಾಖಲಾಗುತ್ತಾರೆ. ಆಸ್ಪತ್ರೆಯಲ್ಲಿ ಶೌಚಾಲಯದ ಕೊರತೆ ಇದೆ. ಶೌಚಾಲಯ ಹಾಗೂ ತಂಗುದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆಯನ್ನು ಜಿಲ್ಲಾಧಿಕಾರಿಗಳು ನಡೆಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಮಿಮ್ಸ್ ನಿರ್ದೇಶಕ ಡಾ ಮಹೇಂದ್ರ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!