Saturday, May 18, 2024

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ವಿದ್ಯಾರ್ಥಿನಿಲಯ ಪರಿಶೀಲಿಸಿದ ಡಾ.ಕುಮಾರ

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಪಾಂಡವಪುರ ಟೌನ್ ನಲ್ಲಿರುವ ಡಿ ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿನಿಯರೊಂದಿಗೆ ಹಾಸ್ಟೆಲ್ ನಲ್ಲಿ ದೊರಕುತ್ತಿರುವ ಸೌಲಭ್ಯಗಳ ಬಗ್ಗೆ ಚರ್ಚಿಸಿದರು. ಸರ್ಕಾರ ನೀಡುತ್ತಿರುವ ಸೌಲಭ್ಯ ಬಳಸಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳಾಗಿ ಉನ್ನತ ಹುದ್ದೆ ಪಡೆಯುವ ರೀತಿ ವಿದ್ಯಾಭ್ಯಾಸ ನಡೆಸಬೇಕು ಎಂದರು.

ನಂತರ ಕಟ್ಟೇರಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳು ಗುಣಮಟ್ಟದಿಂದಿರಬೇಕು. ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!