Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ನೂತನ ತಹಶೀಲ್ದಾರ್ ಡಾ.ಅಶೋಕ್‌ ಅಧಿಕಾರ ಸ್ವೀಕಾರ

ಕೃಷ್ಣರಾಜಪೇಟೆ ತಾಲೂಕಿನ ನೂತನ ತಹಶೀಲ್ದಾರರಾಗಿ ಡಾ. ಯು.ಎಸ್.ಅಶೋಕ್ ಇಂದು ಅಧಿಕಾರ ಸ್ವೀಕರಿಸಿದರು.

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುನಿಸಿಪಲ್ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ರಾಂತ ಕರ್ನಲ್ ಆಗಿರುವ ಅಶೋಕ್ ಅವರನ್ನು ರಾಜ್ಯ ಸರ್ಕಾರವು ಕೆ.ಆರ್.ಪೇಟೆ ತಹಸೀಲ್ದಾರ್ ಆಗಿ ನೇಮಿಸಿ ಸ್ಥಳ ನಿಯುಕ್ತಿಗೊಳಿಸಿದೆ.

ಈ ಹಿಂದಿ ತಹಶೀಲ್ದಾರ್ ನಿಸರ್ಗಪ್ರಿಯಾ ಅವರು ಪಿರಿಯಾಪಟ್ಟಣಕ್ಕೆ ವರ್ಗಾವಣೆಗೊಂಡಿದ್ದರು. ಖಾಲಿಯಾಗಿಯೇ ಉಳಿದಿದ್ದ ತಹಶೀಲ್ದಾರ್ ಹುದ್ದೆಗೆ ಪ್ರಭಾರ ತಹಶೀಲ್ದಾರ್ ಆಗಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದರ್ಶ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ನಂತರ ಡಾ.ಅಶೋಕ್ ಅವರನ್ನು ಸರ್ಕಾರವು ಕೆ.ಆರ್.ಪೇಟೆಗೆ ತಹಶೀಲ್ದಾರ್ ಆಗಿ ನಿಯೋಜನೆ ಮಾಡಿದೆ.

ಸಮಸ್ಯೆಗಳಿಗೆ ಪ್ರಾಮಾಣಿಕ ಪರಿಹಾರ

ನಾನು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸಿದ್ದೇನೆ. ಮುಕ್ತ ನ್ಯಾಯ ಸಮ್ಮತವಾಗಿ ಕರ್ತವ್ಯ ನಿರ್ವಹಿಸಲು ಪಣ ತೊಟ್ಟಿರುವ ನಾನು ಭ್ರಷ್ಟಾಚಾರ ಮುಕ್ತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಜೊತೆಗೆ ಬಡ ಜನರು ಹಾಗೂ ರೈತ ಬಾಂಧವರ ಜೊತೆಗೆ ಬೆರೆತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಪರಿಹಾರ ದೊರಕಿಸಿಕೊಡಲು ಬದ್ಧತೆಯಿಂದ ಕೆಲಸ ಮಾಡುತ್ತೇನೆ ಎಂದು ಡಾ. ಅಶೋಕ್ ಹೇಳಿದರು.

ಈ ಸಂದರ್ಭದಲ್ಲಿ ರಾಜಶ್ವನಿರೀಕ್ಷಕ ಜ್ಞಾನೇಶ್, ಗ್ರಾಮ ಆಡಳಿತ ಅಧಿಕಾರಿ ಜಗಧೀಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!