Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2022- 23 ನೇ ಸಾಲಿನಲ್ಲಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಪರಿಶಿಷ್ಟಜಾತಿಗೆ ಸೇರಿದ 21ರಿಂದ 50 ವರ್ಷ ವಯಸ್ಸಿನವರು ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ದ್ವಿ ಚಕ್ರ, ತ್ರಿ ಚಕ್ರ , ಸರಕು ಸಾಗಾಣಿಕೆ ವಾಹನ) ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ)ಯೋಜನೆ (ಮಹಿಳಾ ಸ್ವ ಸಹಾಯಕ ಗುಂಪುಗಳಿಗೆ) ಪರಿಶಿಷ್ಟ ಜಾತಿಗೆ ಸೇರಿದ 21ವರ್ಷದಿಂದ 60 ವರ್ಷದ ವಯಸ್ಸಿನವರು ನವೆಂಬರ್ 20 ರೊಳಗಾಗಿ  ವೆಬ್ ಸೈಟ್ https://Sevasindu Grama one  ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ದೂ.ಸಂ:08232 221157 ಸಂಪರ್ಕಿಸಬಹುದೆಂದು ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!