Monday, November 23, 2026

ಪ್ರಾಯೋಗಿಕ ಆವೃತ್ತಿ

ಪ್ರತಿಯೊಬ್ಬರು ಅಂಬೇಡ್ಕರ್ ತತ್ವ-ಚಿಂತನೆ ಅಳವಡಿಸಿಕೊಳ್ಳಿ: ಡಾ.ಕುಮಾರ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಡಿಸೆಂಬರ್ 6 ರಂದು ತಮ್ಮ ದೇಹವನ್ನು ತ್ಯಾಗ ಮಾಡಿದ್ದು, ಅವರ ಕೊಡುಗೆ, ಸಾಧನೆಗ, ಆದರ್ಶ, ಚಿಂತನೆ ಹಾಗೂ ಮೌಲ್ಯಗಳು ಇಂದಿಗೂ ಜೀವಂತವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅವರ ಚಿಂತನೆ, ತತ್ವ ಹಾಗೂ ಆದರ್ಶವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಅವರು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶ ಕಂಡಂತಹ ಹೊಸ ಶಕ್ತಿ ಹಾಗೂ ಚೇತನವಾಗಿದ್ದು, ದೇಶಕ್ಕೆ ಅತಿ ದೊಡ್ಡ ಸಂವಿಧಾನವನ್ನು ಕೊಟ್ಟಂತಹ ಪುಣ್ಯಾತ್ಮರು. ಅವರು ನೀಡಿರುವ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಜೀವಿಸುತ್ತಿದ್ದು, ಅಂತಹ ಚೈತನ್ಯ ನಮ್ಮ ದೇಶಕ್ಕೆ ದಕ್ಕಿದ್ದು ನಮ್ಮೆಲ್ಲರ ಪುಣ್ಯವಾಗಿದೆ ಎಂದರು.

ಅಂಬೇಡ್ಕರ್ ಕಂಡಂತಹ ಕನಸಿನ ಅನುಗುಣವಾಗಿ ಸಂವಿಧಾನದ ಆಶಯಗಳಂತೆ ಪಣತೊಟ್ಟು ನಾವೆಲ್ಲರೂ ಬದುಕಬೇಕು.ಅವರು ಚಿಂತನೆಗಳನ್ನು ನಮ್ಮ ಮಕ್ಕಳ ಮನಸ್ಸಿನಲ್ಲಿ ಬಿತ್ತಬೇಕು ಎಂದು ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್ ಮಾತನಾಡಿ, ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 68ನೇ ಪರಿನಿರ್ವಾಣ ದಿನವಾಗಿದೆ. ಅವರು ಬರೆದಿರುವ ಪುಸ್ತಕಗಳು ಪ್ರಸ್ತುತ ದಿನದಲ್ಲಿಯೂ ಜೀವಂತವಾಗಿದೆ. ನಮ್ಮ ದೇಶಕ್ಕೆ ಅವರು ಕೊಟ್ಟಿರುವ ಸಂವಿಧಾನವು ನಮ್ಮ ಬದುಕಿಗೆ ದಾರಿಯಾಗಿದೆ. ಅವರು ಪ್ರತಿಯೊಬ್ಬರಿಗೂ ಸಮಾನತೆ, ಐಕ್ಯತೆ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಸಂವಿಧಾನದ ಮೂಲಕ ನೀಡಿ ಜನರಿಗೆ ಶಕ್ತಿ ತುಂಬಿದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಡಿಸೆಂಬರ್ 6 ರಂದು ನಮ್ಮನ್ನು ಆಗಲಿದರು ಕೂಡ ಅವರು ನೀಡಿದ ಸಂವಿಧಾನದ ಆಧಾರದ ಮೇಲೆ ಇಂದಿಗೂ ಕಾನೂನು ವ್ಯವಸ್ಥೆ ನಿಂತಿದೆ. ಇವತ್ತಿನ ಕಾಲಮಾನ \ಕ್ಕೂ ಪ್ರಸ್ತುತವಾದ ಸಂವಿಧಾನವನ್ನು ಭಾರತಕ್ಕೆ ನೀಡಿದ ಮಹಾನ್ ಚೇತನರಾಗಿದ್ದು, ಇನ್ನೂ ಸಾವಿರಾರು ವರ್ಷ ಕಳೆದರೂ ಬಾಬ ಸಾಹೇಬ್ ಹೆಸರು ಅಜರಾಮರವಾಗಿ ಇರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ