Friday, September 20, 2024

ಪ್ರಾಯೋಗಿಕ ಆವೃತ್ತಿ

ಡಾ.ಬಾಬು ಜಗಜೀವನ್ ರಾಮ್ ಅವರ ಕಾರ್ಯವೈಖರಿ ಎಲ್ಲರಿಗೂ ಆದರ್ಶ : ಪಿ.ಎಂ.ನರೇಂದ್ರಸ್ವಾಮಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ಕಾರ್ಯವೈಖರಿ ಎಲ್ಲರಿಗೂ ಆದರ್ಶವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಸ್ಮರಿಸಿದರು.

ಪಟ್ಟಣದ ಮೈಸೂರು ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ದೀನ ದಲಿತರ, ಬಡವರ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಹೋರಾಟ ನಡೆಸಿದ ಡಾ.ಬಾಬು ಜಗಜೀವನ್ ರಾಮ್ ಅವರ ಆದರ್ಶ ಗುಣಗಳು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.

ಜನರ ಬವಣೆಯನ್ನು ಅರಿತು ಸರ್ವ ಜನಾಂಗದ ಸಹಬಾಳ್ವೆಯ ಬದುಕು ಹಾಗೂ ದೇಶದ ಐಕ್ಯತೆಗಾಗಿ ಅವರ ಕೊಡುಗೆ ಅಪಾರವಾಗಿದೆ, ಸ್ವಾತಂತ್ರ‍್ಯ ಸಂಗ್ರಾಮ ಹಾಗೂ ಸ್ವತಂತ್ರ ನಂತರ ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಪಣಕ್ಕಿಟ್ಟು ನಡೆಸಿದ ಅವರು ಹೋರಾಟ ಆದರ್ಶನೀಯವಾಗಿದೆ ಎಂದರು.

ಇದೇ ವೇಳೆ ಜೆಡಿಎಸ್ ಪಕ್ಷ ತೊರೆದು ಗೌಡಗೆರೆ ಸತೀಶ್, ವಿಶ್ವ, ಡಾ.ಬಾಬು ಜಗಜೀವನ್ ರಾವ್ ವಿಚಾರ ವೇದಿಕೆಯ ಗೌರವಾಧ್ಯಕ್ಷ ಮಂಜು, ಪಟ್ಟಣದ ನಾಗೇಶ್, ನಡುಮಳ್ಳಯ್ಯ, ಶಿವಕುಮಾರ್, ನಡಕಲಪುರ ಭರತ್, ಪ್ರಕಾಶ್, ಲಕ್ಷಣ್, ಅಂಕನಹಳ್ಳಿ ಶಂಕರ್ ಸೇರಿದಂತೆ ಅನೇಕರು ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಪುರಸಭೆ ಸದಸ್ಯರಾದಎಂ.ಆರ್.ರಾಜಶೇಖರ್, ಎಂ.ಎನ್.ಶಿವಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ,ಟಿಎಪಿಸಿಎಂಎಸ್ ಅಧ್ಯಕ್ಷ ಕೆ.ಎಸ್.ದ್ಯಾಪೇಗೌಡ, ನಿರ್ದೇಶಕರಾದ ಎಂ.ಲಿAಗರಾಜು, ಎಚ್.ಬಿ.ಬಸವೇಶ್, ತಾ.ಪಂ.ಮಾಜಿ ಉಪಾಧ್ಯಕ್ಷ ಸಿ.ಮಾಧು, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಎಂ.ಸುಂದರ್, ಮುಖಂಡರಾದ ಶಿವಮಾದೇಗೌಡ, ಬಂಕ್ ಮಹದೇವು, ಕಾಂಗ್ರೆಸ್ ಎಸ್ಸಿ ಮತ್ತು ಎಸ್ಟಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಾಳೆಹೊನ್ನಿಗ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಶಾಂತರಾಜ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!