Tuesday, November 24, 2026

ಪ್ರಾಯೋಗಿಕ ಆವೃತ್ತಿ

ದೇಶಕ್ಕೆ ಡಾ.ಬಾಬು ಜಗಜೀವನ್ ರಾಂ ಕೊಡುಗೆ ಅಪಾರ : ಡಾ.ಕುಮಾರ

ಶೋಷಿತ ಸಮುದಾಯದಲ್ಲಿ ಜನಿಸಿ, ಶೋಷಿತ ಸಮುದಾಯದವರ ಏಳಿಗೆಗಾಗಿ ಶ್ರಮಿಸಿದ ಡಾ.ಬಾಬು ಜಗಜೀವನ ರಾಂ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಮರಿಸಿದರು.

ಮಂಡ್ಯ ಜಿಲ್ಲಾಡಳಿತ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 39ನೇ ಪುಣ್ಯತಿಥಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿನ ಉದ್ಯಾನವನದಲ್ಲಿರುವ ಡಾ.ಬಾಬು ಜಗಜೀವನ ರಾಂ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದರು.

ಡಾ.ಬಾಬು ಜಗಜೀವನ ರಾಂ ಅವರು ಅತೀ ಚಿಕ್ಕ ವಯಸ್ಸಿನಲ್ಲಿ ರಾಜಕೀಯವನ್ನು ಪ್ರವೇಶಿಸಿ ಅತೀ ಹೆಚ್ಚು ಕಾಲ ರಾಜಕೀಯದಲ್ಲಿದ್ದು, ಸಮಾಜ ಸುಧಾರಣೆಗಾಗಿ ಶ್ರಮಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಅನೇಕ ಹೋರಾಟಗಳ ಮೂಲಕ ಸಮಾಜದಲ್ಲಿ ಬದಲಾವಣೆ ತಂದವರು ಡಾ. ಬಾಬು ಜಗಜೀವನ ರಾಂ ಅವರು ಎಂದರೆ ತಪ್ಪಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಂ ಇಬ್ಬರು ಮಹಾನ್ ವ್ಯಕ್ತಿಗಳು ದೇಶದ ಶೋಷಿತ ಸಮುದಾಯದ ಎರಡು ಕಣ್ಣುಗಳು. ಇಂದಿನ ಯುವ ಪೀಳಿಗೆಗಳು ಅವರ ಚಿಂತನೆ ಹಾಗೂ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣಕುಮಾರ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಕೋಮಲ್ ಕುಮಾರ್, ಡಾ.ಬಾಬು ಜಗಜೀವನ ರಾಂ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎನ್. ಆರ್ ಚಂದ್ರಶೇಖರ್, ನಗರಸಭಾ ಸದಸ್ಯ ಎಂ.ಎನ್ ಶ್ರೀಧರ್, ನಗರಸಭೆ ಎ.ಇ.ಇ ರವಿಕುಮಾರ್, ಮುಖಂಡರಾದ ಎಂ. ಎನ್ ತುಳಸೀಧರ್, ಸಿ.ಕೆ ಪಾಪಯ್ಯ, ಶೇಖ್ ಉಬೇದುಲ್ಲಾ, ಎಂ.ವಿ ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ