Monday, November 23, 2026

ಪ್ರಾಯೋಗಿಕ ಆವೃತ್ತಿ

ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ನೀಡಲು ಶ್ರಮಿಸಿದ ಬಾಬೂಜಿ : ಸಿಎಂ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು. ದಮನಿತರಿಗೆ ಮಾತ್ರವಲ್ಲದೆ ಎಲ್ಲ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಶನಿವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 118 ನೇ ಜನ್ಮದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

“ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ದಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು.

ಕೃಪೆ : ಈ ದಿನ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ