ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ಕುರಿ ಸಾಕಾಣಿಕೆ ಉದ್ದೇಶಕ್ಕೆ ರೂ 1 ಲಕ್ಷ (ರೂ.50000 ಸಾಲ ಮತ್ತು ರೂ.50000 ಸಹಾಯಧನ) ಸಾಲ ಸೌಲಭ್ಯ ಕಲ್ಪಿಸಲಾಗಿದೆ ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಫುಡ್ ಕಾರ್ಟ್ ಉದ್ದೇಶಕ್ಕೆ ಬ್ಯಾಂಕ್ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 18 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ದೂ.ಸಂ.08232-221157 ಹಾಗೂ ಎಸ್.ಸಿ/ಎಸ್.ಟಿ ಸಹಾಯವಾಣಿ ದೂ.ಸಂ. 9482-300-400 ಸಂಪರ್ಕಿಸಬಹುದು ಎಂದು ಮಂಡ್ಯ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




