Thursday, July 25, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಂಗವಿಕಲರ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಚಲುವರಾಜು ನಿಧನ

ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ಎಸ್.ಚಲುವರಾಜು (44) ಮೈಸೂರಿನ ಆಸ್ಪತ್ರೆಯಲ್ಲಿ ಸೋಮವಾರ ಹೃದಯಾಘಾತದಿಂದ ನಿಧನರಾದರು.

ಮಂಡ್ಯ ತಾಲೂಕು ಮಾರಗೌಡನಹಳ್ಳಿ ಗ್ರಾಮದವರಾದ ಚಲುವರಾಜುಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಪ್ರಸ್ತುತ ಮಂಡ್ಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸ್ವೀಪ್ ಸಮಿತಿಯ ಜಿಲ್ಲಾ ರಾಯಭಾರಿಯಾಗಿ ನೇಮಕಗೊಂಡು ಮತದಾನದ ಬಗ್ಗೆ ಜಿಲ್ಲಾದ್ಯಂತ ಜಾಗೃತಿ ಮೂಡಿಸಿದ್ದರು.

ಅಲ್ಲದೆ, 2012ರಲ್ಲಿ ಜಪಾನ್‌ನಲ್ಲಿ ನಡೆದ ಅಂತರರಾಷ್ಟ್ರೀಯ ವಿಕಲಚೇತನರ ಮಹಾಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಬಂಧ ಮಂಡಿಸಿದ್ದರು. ರಾಜ್ಯ ಸರ್ಕಾರ 2023ರಲ್ಲಿ ವಿಕಲಚೇತನರ ಶ್ರೇಷ್ಠ ಸಂಘಟನೆಗಾಗಿ ನೀಡಿದ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದರು. ವಿಕಲಚೇತನರ ಸಮಸ್ಯೆಗಳ ಕುರಿತ ಪ್ರೌಢ ಪ್ರಬಂಧಕ್ಕೆ 2022ರಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು.

ಮೃತ ಚಲುವರಾಜು ಅವರ ಸ್ವಗ್ರಾಮ ಮಾರಗೌಡನಹಳ್ಳಿಯಲ್ಲಿ ಮಂಗಳವಾರ (ಜು.2) ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!