Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ- ಡಾ. ಈ.ಸಿ ನಿಂಗರಾಜ್‌ಗೌಡ

ಮಕ್ಕಳಲ್ಲಿ ಅಗಾಧವಾದ ಪ್ರತಿಭೆಗಳು ಇರುತ್ತದೆ, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಉನ್ನತ ಸ್ಥಾನ ಗಳಿಸಬಹುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಈ.ಸಿ.ನಿಂಗರಾಜ್‌ಗೌಡ ಹೇಳಿದರು.

ಮಂಡ್ಯ ನಗರದ ಗಾಂಧಿ ಭವನದಲ್ಲಿ ಕಲಾತಪಸ್ವಿ ಕರ್ನಾಟಕ, ಈ.ಸಿ.ನಿಂಗರಾಜ್‌ಗೌಡ ಫೌಂಡೇಶನ್ ವತಿಯಿಂದ ನೆಡೆದ ಕಲಾತಪಸ್ವಿ ಆರ್ಟ್ ಕ್ಲಬ್ 2ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಲಾ ತಪಸ್ವಿ ಹೆಜ್ಜೆ,ಸರ್ಕಾರಿ ಶಾಲೆಯ ಕಡೆ ಚಿತ್ರಕಲೆ, ವೇಷಭೂಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದ ಜೊತೆಗೆ ಕಲೆ,ಕ್ರೀಡೆ, ಸಾಹಿತ್ಯ,ವಿಜ್ಞಾನ ತಂತ್ರಜ್ಞಾನ ಕೂಡ ಮನುಷ್ಯನಿಗೆ ಅವಶ್ಯಕವಾಗಿದ್ದು,ಮಕ್ಕಳು ಶಿಕ್ಷಣದ ಜೊತೆಗೆ ಕಲೆ ಸೇರಿದಂತೆ ಇತರೆ ಸಾಂಸ್ಕೃತಿಕ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಈ ವೇಳೆ ಅನೇಕ ವಿದ್ಯಾರ್ಥಿಗಳು ಚಿತ್ರಕಲೆ, ವೇಷಭೂಷಣ, ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಶ್ರೀಮತಿ ದೇವಮ್ಮ ಚಿಕ್ಕಮರೀಗೌಡ ಗೌಡರವರ ಸ್ಮರಣಾರ್ಥ ಕಲಾ ಚಿಗುರು ಪ್ರಶಸ್ತಿ ಪುರಸ್ಕೃತ ತುಷಾರ್ ಚನ್ನೇಗೌಡ,ಮಾತೃಶ್ರೀ ಪ್ರಶಸ್ತಿ ಪುರಸ್ಕೃತರಾದ ಶೋಭಾ ಪ್ರದೀಪ್ ಕುಮಾರ್,ಉತ್ತಮ ಕುಟುಂಬ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಖುಷಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಲಾತಪಸ್ವಿ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಎಸ್.ಬಿ.ಅನಿಲ್ ಕುಮಾರ್, ಉಪಾಧ್ಯಕ್ಷ ಲೋಹಿತ್ ಕುಮಾರ್, ಶೃತಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!